ಬೆಂಗಳೂರು: ಎಲ್ಲರೂ ಒಗ್ಗಟ್ಟಾಗಿ ನಡೆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿ (BJP) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಬಹುದು. ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ ಪಕ್ಷದ ವರಿಷ್ಠರಾದ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಹೆಚ್‍ಡಿಕೆ ತಿಹಾರ್ ಜೈಲಿಗೆ ಹೋಗುವ ತಪ್ಪೇನು ಮಾಡಿಲ್ಲ: ಕಾಂಗ್ರೆಸ್‍ಗೆ ಜೆಡಿಎಸ್ ಟಾಂಗ್
Advertisement
Advertisement
ವಿಧಾನಸಭೆ ಚುನಾವಣೆ (Assembly Election) ನಂತರ ಬಿಜೆಪಿಗೆ ದೊಡ್ಡ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಗೆಲ್ಲುವ ರೀತಿಯಲ್ಲೇ ವಿಜಯೇಂದ್ರ ಸಾರಥ್ಯದಲ್ಲಿ ಬಿಜೆಪಿ 28 ಲೋಕಸಭಾ ಕ್ಷೇತ್ರ ಪಡೆದುಕೊಳ್ಳುವ ವಿಶ್ವಾಸವಿದೆ. ವಿಜಯೇಂದ್ರ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಗೆದ್ದಿದ್ದೇನೆ, ಹಾಗಂತ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಮಾಡಬಾರದಾ? – ಬಿಜೆಪಿಗರಿಗೆ ಎಸ್‌ಟಿಎಸ್ ತಿರುಗೇಟು
Advertisement