ಭೋಪಾಲ್: 17 ವರ್ಷದ ಅಪ್ರಾಪ್ತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ದೈಹಿಕ ಹಲ್ಲೆ (Physical Assaults) ನಡೆಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ವಿಕೃತ ಕಾಮಿ ಅತ್ಯಾಚಾರ ಎಸಗಿದ್ದಲ್ಲದೇ ಬಾಲಕಿಯ ತಲೆಯನ್ನ ನೆಲಕ್ಕೆ ಗುದ್ದಿಸಿದ್ದಾನೆ. ಬಳಿಕ ಆಕೆಯ ಖಾಸಗಿ ಭಾಗವನ್ನು ಘಾಸಿಗೊಳಿಸಿದ್ದಾನೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಫಡ್ನವಿಸ್ ಕಚೇರಿ ಮೇಲೆ ದಾಳಿ ನಡೆಸುವ ಬೆದರಿಕೆ – ಪಾಕ್ ಮೂಲದ ಸಂಖ್ಯೆಯಿಂದ ಕರೆ
ಸದ್ಯ ಸಂತ್ರಸ್ತೆಯನ್ನ ಆಸ್ಪತ್ರೆಗೆ (Gwalior hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿಯ ಖಾಸಗಿ ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅಲ್ಲದೇ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕಿಯ ಜನನಾಂಗಗಳಿಗೆ 28 ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್
ಘಟನೆ ನಡೆದಿದ್ದು ಯಾವಾಗ?
ಫೆ.22ರಂದು ಅಪ್ರಾಪ್ತ ಯುವಕ ಬಾಲಕಿಯನ್ನ ಮನೆಯ ಮೇಲ್ಛಾವಣಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನ ಹತ್ಯೆ ಮಾಡುವ ಉದ್ದೇಶದಿಂದ ದೈಹಿಕ ಹಲ್ಲೆ ನಡೆಸಿದ್ದಾನೆ. ಆಕೆಯ ಖಾಸಗಿ ಭಾಗಗಳನ್ನ ಘಾಸಿಗೊಳಿಸಿದ್ದಾನೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಮರಳಿ ಪ್ರಜ್ಞೆ ಬಂದ ಬಳಿಕ ಪೋಷಕರ ಮುಂದೆ ಘಟನೆ ವಿವರಿಸಿದ್ದಾಳೆ. ಬಳಿಕ ಪೊಷಕರು ದೂರು ದಾಖಲಿಸಿದ್ದ ಆರೋಪಿಯನ್ನು ಅಪ್ರಾಪ್ತ ಎಂದು ಪರಿಗಣಿಸದಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
ಈ ಬೆನ್ನಲ್ಲೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ಮತ್ತೆರಡು ವಿಧೇಯಕ ವಾಪಸ್ – ರಾಜ್ಯಪಾಲರು vs ರಾಜ್ಯ ಸರ್ಕಾರದ ನಡುವೆ ಮುಂದುವರಿದ ಜಟಾಪಟಿ