ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 283 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
Advertisement
ರಾಜ್ಯದಲ್ಲಿ 290 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,989 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,90,235 ಮಂದಿಗೆ ಕೊರೊನಾ ಬಂದಿದೆ. 29,44,099 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.12 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನೋತ್ಸವ – ಕಾಣಿಕೆ ಹುಂಡಿಯಲ್ಲಿ ಭಕ್ತರ ನಾನಾ ಕೋರಿಕೆ ಪತ್ರ!
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 2,02,614 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,05,278 ಸ್ಯಾಂಪಲ್ (ಆರ್ಟಿ ಪಿಸಿಆರ್ 94,941 + 10,337 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 159 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 104 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 159, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 10, ದಾವಣಗೆರೆ 0, ಧಾರವಾಡ 7, ಗದಗ 0, ಹಾಸನ 24, ಹಾವೇರಿ 0, ಕಲಬುರಗಿ 3, ಕೊಡಗು 8, ಕೋಲಾರ 11, ಕೊಪ್ಪಳ 0, ಮಂಡ್ಯ 6, ಮೈಸೂರು 15, ರಾಯಚೂರು 2, ರಾಮನಗರ 2, ಶಿವಮೊಗ್ಗ 1, ತುಮಕೂರು 6, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ