ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 286 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. 7 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ 289 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಒಟ್ಟು 8,017 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,91,142 ಮಂದಿಗೆ ಕೊರೊನಾ ಬಂದಿದೆ. 29,44,958 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.44 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.25 ರಷ್ಟಿದೆ. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್ಡಿಕೆ
Advertisement
Advertisement
ಇಂದು ರಾಜ್ಯದಲ್ಲಿ ಒಟ್ಟು 1,06,278 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,11,190 ಸ್ಯಾಂಪಲ್ (ಆರ್ಟಿ ಪಿಸಿಆರ್ 90,584 + 20,606 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ 169 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 171 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 3 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 169, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 17, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 23, ಹಾವೇರಿ 0, ಕಲಬುರಗಿ 0, ಕೊಡಗು 2, ಕೋಲಾರ 4, ಕೊಪ್ಪಳ 0, ಮಂಡ್ಯ 2, ಮೈಸೂರು 11, ರಾಯಚೂರು 0, ರಾಮನಗರ 1, ಶಿವಮೊಗ್ಗ 4, ತುಮಕೂರು 12, ಉಡುಪಿ 3, ಉತ್ತರ ಕನ್ನಡ 16, ವಿಜಯಪುರ, ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿಸೆಂಬರ್ನಲ್ಲಿ ರಾಜ್ಯಕ್ಕೆ ಪ್ರಧಾನಿ ಭೇಟಿ