– 17ಕ್ಕೂ ಹೆಚ್ಚು ಮಂದಿ ಗಾಯ
– ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ
ಲಕ್ನೋ: ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
Advertisement
ಯಮುನಾ ಎಕ್ಸ್‌ಪ್ರೆಸ್ ಹೈವೇನಲ್ಲಿ ಇಂದು ಬೆಳಗ್ಗಿನ ಜಾವ ಈ ದುರಂತ ಸಂಭವಿಸಿದೆ. 165 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ಆಗ್ರಾ ಮತ್ತು ನೊಯ್ಡಾವನ್ನು ಸಂಪರ್ಕಿಸುತ್ತದೆ. ಇದೊಂದು ಡಬಲ್ ಡೆಕ್ಕರ್ ಬಸ್ಸಾಗಿದ್ದು, ಈ ಬಸ್ ಸುಮಾರು 50 ಮಂದಿ ಪ್ರಯಾಣಿಕರನ್ನು ಲಕ್ನೋದಿಂದ ದೆಹಲಿಗೆ ಕರೆದುಕೊಂಡು ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಚಾಲಕ ನಿದ್ದೆ ಮಂಪರಿನಲ್ಲಿದ್ದನು. ಹೀಗಾಗಿ ಬಸ್ ಸ್ಕಿಡ್ ಆಗಿ ಆಗ್ರಾ ಎಕ್ಸ್‌ಪ್ರೆಸ್‌ವೇ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಚರಂಡಿಗೆ ಬಿದ್ದಿದೆ. ಪರಿಣಾಮ 29 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆದ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.
Advertisement
UP: 29 dead as bus falls into drain on Yamuna Expressway
Read @ANI story | https://t.co/DRSptaQLqk pic.twitter.com/RDb7yV64z0
— ANI Digital (@ani_digital) July 8, 2019
ಅಪಘಾತವಾದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಚರಂಡಿಗೆ ಇಳಿದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿರುವ ಮೃತದೇಹವನ್ನು ಹೊರತೆಗೆಯಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
#UPDATE 29 persons dead after a bus carrying around 40 passengers fell into 'jharna nalla' on Yamuna Expressway in Agra. Rescue operation underway. pic.twitter.com/mAnY9pUsgX
— ANI UP/Uttarakhand (@ANINewsUP) July 8, 2019
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸ್ ದುರಂತಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಮತ್ತು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಫೋಷಿಸಿದೆ.