ಇಸ್ತಾಂಬುಲ್: ಇಲ್ಲಿನ 16 ಅಂತಸ್ತಿನ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Istanbul Fire Accident) ಕನಿಷ್ಠ 29 ಜನ ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ.
ಆರಂಭದಲ್ಲಿ 10 ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದರು. ಇದೀಗ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಓರ್ವ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಲ್ಲಿನ ಗವರ್ನರ್ ದಾವುತ್ ಗುಲ್ ತಿಳಿಸಿದ್ದಾರೆ.
Advertisement
Advertisement
ಬೆಂಕಿಯು ಮಧ್ಯಾಹ್ನ 12:47ಕ್ಕೆ ಕಾಣಿಸಿಕೊಂಡಿದೆ. ಭಾರೀ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸಪಟ್ಟಿದೆ. ನೈಟ್‍ಕ್ಲಬ್‍ನ್ನು ಹೊಂದಿದ್ದ ಅಂಡರ್‌ಗ್ರೌಂಡ್ (ನೆಲಮಾಳಿಗೆ) ಮೊದಲ ಮತ್ತು 2ನೇ ಮಹಡಿ ನಿರ್ಮಾಣ ಕಾರ್ಯದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಇಸ್ತಾನ್‍ಬುಲ್‍ನ ಮೇಯರ್ ಎಕ್ರೆಮ್ ಇಮಾಮೊಗ್ಲು, ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮೃತರಿಗೆ ಸಂತಾಪ ಸೂಚಿಸಿದ್ದಾರೆ.