ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 29 ಮಂದಿಯಲ್ಲಿ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ ಒಂದರಲ್ಲೇ 24 ಮತ್ತು ದಕ್ಷಿಣಕನ್ನಡದಲ್ಲಿ 1, ಕಲಬುರಗಿ 2, ರಾಮನಗರ 1 ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಇಂದು ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
Advertisement
ಈವರೆಗೆ ಒಟ್ಟು ರಾಜ್ಯದಲ್ಲಿ 40,055 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.73%ಕ್ಕೆ ಮತ್ತು ರಾಜ್ಯದ ಉಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,468ಕ್ಕೆ ಇಳಿಕೆ ಕಂಡಿದೆ. ವಾರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 0.33% ಮತ್ತು ವಾರದ ಮರಣ ಪ್ರಮಾಣ 0.96% ರಷ್ಟಿದೆ. ಒಟ್ಟು 61 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,45,727 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,162 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 12,376 ಸ್ಯಾಂಪಲ್ (ಆರ್ ಟಿಪಿಸಿಆರ್ 7,031 + 5,345 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 24 ಮತ್ತು ದಕ್ಷಿಣಕನ್ನಡದಲ್ಲಿ 1, ಕಲಬುರಗಿ 2, ರಾಮನಗರ 1 ಪ್ರಕರಣ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಇಂದಿನ 05/04/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/b61LXv2bYQ @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/x0jr55qWmY
— K'taka Health Dept (@DHFWKA) April 5, 2022