ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿ 29 ಮಂದಿ ಮಹಿಳಾ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ನಂಜದೇವನಪುರ ಬಳಿ ನಡೆದಿದೆ.
29 ಮಂದಿ ಮಹಿಳೆಯರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಕೂಲಿ ಮುಗಿಸಿ ಹಿಂತಿರುಗುವಾಗ ಘಟನೆ ನಡೆದಿದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಅಸ್ಪೃಶ್ಯತೆ ಆಚರಣೆಗೆ ಗಲಭೆ ಕೇಸ್: 101 ಜನರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದ ನ್ಯಾಯಾಲಯ
ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಮಹಿಳೆಯರಾಗಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ವಾಹನದಲ್ಲಿ ಕೂರಿಸಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಸದ್ಯ ಎಲ್ಲರನ್ನೂ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮಾರಾಟ ಮಾಡಿದ ಮನೆ ಖಾಲಿ ಮಾಡದ್ದಕ್ಕೆ ಬಾವನನ್ನೇ ಹತ್ಯೆಗೈದ ಬಾಮೈದ!