ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣದಲ್ಲಿ ಕೊಂಚ ಏರಿಕೆ ಕಂಡಿದೆ. 296 ಮಂದಿಗೆ ಇಮದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕೊರೊನಾ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದ್ದು, ಇಂದು ಐವರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 157 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 171 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಓರ್ವ ಮೃತಪಟ್ಟಿರುವುದು ವರದಿಯಾಗಿದೆ.
Advertisement
Advertisement
Advertisement
ರಾಜ್ಯದಲ್ಲಿ 296 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,267 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,89,275 ಮಂದಿಗೆ ಕೊರೊನಾ ಬಂದಿದೆ. 29,42,884 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.91 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.48 ರಷ್ಟಿದೆ.
Advertisement
ಇಂದು ರಾಜ್ಯದಲ್ಲಿ ಇಂದು ಒಟ್ಟು 59,910 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 53,488 ಸ್ಯಾಂಪಲ್ (ಆರ್ಟಿ ಪಿಸಿಆರ್ 45,738 + 17,750 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 157, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 16, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 2, ಕೊಡಗು 9, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 13, ರಾಯಚೂರು 0, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 4, ವಿಜಯಪುರ 3 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇಂದಿನ 04/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bUNN9ldg3s
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BPb8BSKPfD
— K'taka Health Dept (@DHFWKA) November 4, 2021