ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 297ಕ್ಕೆ ಏರಿಕೆ ಕಂಡಿದ್ದು, ಈ ಮೂಲಕ ಮುನ್ನೂರರ ಸನಿಹಕ್ಕೆ ಕಾಲಿಟ್ಟಿದೆ. ಇನ್ನೊಂದೆಡೆ ಬೆಂಗಳೂರು ನಗರ ಒಂದರಲ್ಲೇ 276 ಕೇಸ್ ವರದಿಯಾಗಿ ಆತಂಕ ಮೂಡಿಸಿದೆ.
Advertisement
ಬೆಂಗಳೂರಿನಲ್ಲಿ 276 ಪಾಸಿಟಿವ್ ಪ್ರಕರಣ ವರದಿಯಾಗಿರುವುದು ನಗರದಲ್ಲಿ ಮತ್ತೆ ಕೊರೊನಾ ಆತಂಕ ಮೂಡಿಸುತ್ತಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ ಕಾಣುವುದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 2,204ಕ್ಕೆ ತಲುಪಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಬಂದಿದ್ದ ಕೇರಳದ 12 ವರ್ಷದ ಹುಡುಗಿ ಹಂದಿ ಜ್ವರಕ್ಕೆ ಬಲಿ – ರಾಜಧಾನಿಗೆ ಆತಂಕ
Advertisement
Advertisement
ಬೆಂಗಳೂರು ಹೊರತು ಪಡಿಸಿ ಉಳಿದಂತೆ 8 ಜಿಲ್ಲೆಗಳಲ್ಲಿ 21 ಕೇಸ್ ಮತ್ತು 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 187 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.45 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಇನ್ಸ್ಟಾಗ್ರಾಂನಲ್ಲಿ Sorry ಅಂತಾ ಬರೆದು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,52,577 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,10,266 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 52,738 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 20,380 ಸ್ಯಾಂಪಲ್ (ಆರ್ಟಿಪಿಸಿಆರ್ 15,368 + 5,012 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 276, ದಕ್ಷಿಣ ಕನ್ನಡ 8, ಮೈಸೂರು 4, ಬಳ್ಳಾರಿ 2 ಚಿತ್ರದುರ್ಗ, ಹಾಸನ, ರಾಯಚೂರು ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 297 ಕೇಸ್ ವರದಿಯಾಗಿದೆ.