ನಾನಾಗಿದ್ರೆ ಸಿದ್ದರಾಮಯ್ಯನ ಕಪಾಳಕ್ಕೆ ಹೊಡಿತಿದ್ದೆ : ಸಿಎಂ‌ ವಿರುದ್ಧ ಅಭಿನವ ಸಂಗನಬಸವ ಶ್ರೀ ಕಿಡಿ

Public TV
1 Min Read
Abhinava Sanganabasava Shivacharya Swamiji

ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಲಫಂಗ ಇದ್ದಾನೆ, ಮೀಸಲಾತಿ ನೀಡಲ್ಲ ಎಂದು ಕೂಲಡಸಂಗಮ ಶ್ರೀಗಳಿಗೆ ನಾನು ಹೇಳಿದ್ದೆ ಎಂದು ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ (Abhinava Sanganabasava Shivacharya Swamiji) ಸಿಎಂ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಕೊಲ್ಹಾರದ ರೋಣಿಹಾಳ ಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ 246ನೇ ಜಯಂತಿ ಕಾರ್ಯಕ್ರಮದಲ್ಲಿ ಹಾಗೂ 200ನೇ ವಿಜಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಪಂಚಮಸಾಲಿ (Panchamasali Lingayat) 2ಎ ಮೀಸಲಾತಿ (2A Category Reservation) ವಿಚಾರವಾಗಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಕೈ ಹಾಕ್ತಾನೆ. ನಾನೇ ಆಗಿದ್ರೇ ಅವರ ಕಪಾಳಕ್ಕೆ ಹೊಡೆಯುತ್ತಿದ್ದೆ. ಸಿಎಂ ಆದಾಗ ಗದ್ದಲ ಮಾಡ್ತಾರೆ. ಪಂಚಮಸಾಲಿ 2ಎ ಮೀಸಲಾತಿಯಲ್ಲಿ ನಾಟಕ ಮಾಡಿಕೊಂಡು ಹೋಗುತ್ತಿದ್ದಾರೆ. ಸಿದ್ದರಾಮಯ್ಯ ಮೀಸಲಾತಿ ನೀಡಲ್ಲ ಎಂದು ಕಿಡಿಕಾರಿದ್ದಾರೆ.

ಬೇರೆ ಯಾರಾದ್ರೂ ಸಿಎಂ ಆದಾಗ ಪಂಚಮಸಾಲಿ 2ಎ ಮೀಸಲಾತಿ ಸಿಗಬಹುದು. ಆದರೆ ಈಗ ಮಾತ್ರ ಸಿಗುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article