– ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.
Advertisement
ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್ ಪ್ರತಾಪ್ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!
Advertisement
Advertisement
ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.
Advertisement
ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.
ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.
ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ