– ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತಯಾರಿ
– ಸ್ಥಳೀಯರ ಆಕ್ರೋಶ
ಮಡಿಕೇರಿ: ಹುಲಿ ದಾಳಿಗೆ (Tiger Attack) ಸಿಲುಕಿ ಸೋಮವಾರ ಬೆಳಗ್ಗೆ ಕೇರಳ ಗಡಿಭಾಗ ಪಲ್ಲೇರಿ ಗ್ರಾಮದಲ್ಲಿ ಕೃಷಿ ಕಾರ್ಮಿಕ ರಾಜು (75) ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ.
Advertisement
ಸೋಮವಾರ ಬೆಳಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರನೇ ದಾಳಿ ನಡೆಸಿದೆ. ತಲೆ ಹಾಗೂ ಕುತ್ತಿಗೆ ಭಾಗವನ್ನು ತೀವ್ರವಾಗಿ ಗಾಯಗೊಳಿಸಿದ್ದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
Advertisement
ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ
Advertisement
ಭಾನುವಾರ ಸಂಜೆ ಹುಲಿ ದಾಳಿಗೆ ಕಾರ್ಮಿಕ ಯುವಕ ಚೇತನ್ (18) ಮೃತಪಟ್ಟ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದ್ದು ಕಾರ್ಮಿಕರ ಆತಂಕ ಹೆಚ್ಚಿಸಿದೆ.
ಸ್ಥಳೀಯರ ಆಕ್ರೋಶ:
ದಕ್ಷಿಣ ಕೊಡಗಿನಲ್ಲಿ 5 ವರ್ಷಗಳಿಂದ ನಿರಂತರವಾಗಿ ಜಾನುವಾರುಗಳನ್ನು ಬಲಿ ತೆಗೆದುಕೊಳ್ಳುತಿದ್ದ ಹುಲಿಗಳು ಇದೀಗ ಮನುಷ್ಯರ ಮೇಲೆ ದಾಳಿ ನಡೆಸತೊಡಗಿವೆ. ಜಾನುವಾರುಗಳು ಖಾಲಿಯಾಗಿ ಅವುಗಳು ಸಿಗದೆ ಇರುವುದರಿಂದ ಮನುಷ್ಯರನ್ನು ಬಲಿ ತೆಗೆದುಕೊಳ್ಳಲಾರಂಭಿಸಿವೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವುಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿರುವ SLV ಭವನ ನೆಲಸಮಗೈದ ಪುಡಿರೌಡಿಗಳು!
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k