ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ. ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು “2 nd ಲೈಫ್” ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.
Advertisement
ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ. ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ “2nd ಲೈಫ್” ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು. ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್. ಇದನ್ನೂ ಓದಿ:ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ದಂಪತಿ ಭೇಟಿ
Advertisement
Advertisement
ಈ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಸಿಂಧೂ ರಾವ್ ತಿಳಿಸಿದರು. ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ, ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ – ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.