ಶ್ರೀನಗರ: ದಶಕಗಳ ಬಳಿಕ ಜಮ್ಮು (Jammu) ಮತ್ತು ಕಾಶ್ಮೀರದಲ್ಲಿ (Kashmir) ನಡೆದ ಚುನಾವಣೆಯಲ್ಲಿ (Election) ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಈ ಹಂತದಲ್ಲಿ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 25.78 ಲಕ್ಷ ಮತದಾರರು, 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್
Advertisement
Advertisement
ಒಟ್ಟು 3,502 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಇವುಗಳಲ್ಲಿ 1,056 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಮತ್ತು 2,446 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ. ಪಾರದರ್ಶಕ ಚುನಾವಣೆಗಾಗಿ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
Advertisement
ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಬಿಜೆಪಿ (BJP) ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ, ಪ್ರದೇಶ ಕಾಂಗ್ರೆಸ್ (Congress) ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ಪಿಜಿ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್
Advertisement
ಮೊದಲ ಹಂತ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ 18ರಂದು ಶಾಂತಿಯುತವಾಗಿ ನಡೆದಿದ್ದು. ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಇದನ್ನೂ ಓದಿ: ವಾರದ ರಜೆ ದಿನ ಮಹಾಲಕ್ಷ್ಮಿ ಕೊಲೆ? – ಸೆಪ್ಟೆಂಬರ್ 1, 2, 3ರ ಮರ್ಡರ್ ಮಿಸ್ಟ್ರಿಯ ಎಕ್ಸ್‌ಕ್ಲೂಸಿವ್ ಮಾಹಿತಿ