ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ಮಕ್ಕಳು ಪಾಸ್ ಆಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ಮಾತನಾಡಿದ ಅವರು, ಮಕ್ಕಳು ನಿರೀಕ್ಷೆಗಿಂತ ಚೆನ್ನಾಗಿ ಮಾಡಿದ್ದಾರೆ. ಕೋವಿಡ್ ಮಧ್ಯೆ ಉತ್ತಮವಾಗಿ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಕ್ಕಳು ಸ್ಪೋಟೀವ್ ಆಗಿ ಫಲಿತಾಂಶ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
Advertisement
Advertisement
ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, 2 ಹಾಗೂ 3 ನೇ ಸ್ಥಾನದಲ್ಲಿ ಕ್ರಮವಾಗಿ ಉಡುಪಿ (86.38%) ವಿಜಯಪುರ (77.14%) ಪಡೆದಿದ್ದು, ಕೊನೆ ಸ್ಥಾನ ಚಿತ್ರದುರ್ಗ (49.31%) ಪಡೆದುಕೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್ ಮೂಲಕ ವೀಕ್ಷಿಸಬಹುದು.
Advertisement
81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ ಹಾಗೂ ರಿಪೀಟರ್ಸ್ 61,838ರಲ್ಲಿ 14,403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ. ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
Advertisement
4,22,966 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೇ ಹೆಚ್ಚು ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದ ಶೇ. 72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ. 64.97ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ. 48.71ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,810 ವಿದ್ಯಾರ್ಥಿಗಳು ಗ್ರೇಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಈ ಬಾರಿ ಒಂದೇ ಒಂದು ಕಾಲೇಜಿನಲ್ಲೂ ಶೂನ್ಯ ಫಲಿತಾಂಶ ದಾಖಲಾಗಿಲ್ಲ. ಇದನ್ನೂ ಓದಿ: ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ
ಸರ್ಕಾರಿ ಕಾಲೇಜುಗಳಲ್ಲಿ 52.84% ಫಲಿತಾಂಶ ಬಂದಿದ್ದು, ಅನುದಾನಿತ ಕಾಲೇಜು 62.05% ಹಾಗೂ ಖಾಸಗಿ ಕಾಲೇಜುಗಳು 76.50% ಫಲಿತಾಂಶ ಪಡೆದುಕೊಂಡಿವೆ. ಇನ್ನುಳಿದಂತೆ ಕಾರ್ಪೊರೇಷನ್ ಕಾಲೇಜು 55.72% ಫಲಿತಾಂಶ ಪಡೆದುಕೊಂಡಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 30 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆ ದಿನವಾಗಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ