ಬೆಂಗಳೂರು: ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮಾರ್ಚ್ 1 ರಿಂದ 17 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
Advertisement
Advertisement
ಸೋಮಾವರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್‍ನಲ್ಲಿ ಫಲಿತಾಂಶ ಹೊರಬರಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
Advertisement
Pue.kar.nic. ವೆಬ್ ಸೈಟ್‍ನಲ್ಲಿ ಫಲಿತಾಂಶ ವಿವರ ಲಭ್ಯವಾಗಲಿದೆ.