ಬರ್ರೆನ್: ಟೋಕಿಯೋ ಒಲಿಂಪಿಕ್ಸ್‌ನಲ್ಲಿ (Olympics) ಚಿನ್ನಗೆದ್ದು ಭಾರತದ ಕೀರ್ತಿಪತಾಕೆ ಹಾರಿಸಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ (Neeraj Chopra) ಲಾಸೆನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ.
Golden boy #NeerajChopra
ओलंपियन नीरज चोपड़ा ने डायमंड लीग में जीता गोल्ड।@Neeraj_chopra1pic.twitter.com/zSUGNZbIjS
— Harpinder Singh (@HarpinderTohra) July 1, 2023
Advertisement
ಒಲಿಂಪಿಕ್ಸ್ ಬಳಿಕ ಅದ್ಭುತ ಫಾರ್ಮ್ ಮುಂದುವರಿಸಿರುವ ನೀರಜ್ ಪ್ರತಿಷ್ಠಿತ ಡೈಮಂಡ್ ಲೀಗ್ (Lausanne Diamond League) ಸ್ಪರ್ಧೆಯಲ್ಲಿ ಚಿನ್ನಕ್ಕೆ ಕೊರಳೊಡ್ಡಿದ್ದಾರೆ. ಈ ಹಿಂದೆ ದೋಹಾ ಡೈಮಂಡ್ ಲೀಗ್‌ನಲ್ಲಿ ಗೆದ್ದಿದ್ದ ನೀರಜ್ ಚೋಪ್ರಾ, ಡೈಮಂಡ್ ಲೀಗ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: Indonesia Open 2023: ಐತಿಹಾಸಿಕ ಜಯ ತಂದ ಮೊದಲ ಭಾರತೀಯ ಜೋಡಿ, ಸಾತ್ವಿಕ್‌ಸಾಯಿರಾಜ್, ಚಿರಾಗ್‌ಗೆ ಪ್ರಶಸ್ತಿ
Advertisement
ಗಾಯದ ಸಮಸ್ಯೆಯಿಂದ ಯಾವುದೇ ಟೂರ್ನಿಯಲ್ಲಿ ಪಾಲ್ಗೊಳ್ಳದೇ ವಿಶ್ರಾಂತಿಯಲ್ಲಿದ್ದ ನೀರಜ್ ಇದೀಗ ಡೈಮಂಡ್ ಲೀಗ್ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಹೌದು.. ಸ್ನಾಯು ಸೆಳೆತ ಕಾರಣದಿಂದಾಗಿ ಕಳೆದ ಜೂನ್ 4ರಂದು ನೆದರ್‌ಲ್ಯಾಂಡ್ಸ್‌ನ ಹೆಂಗೆಲೋದಲ್ಲಿ ನಡೆದ ಎಫ್‌ಬಿಕೆ ಗೇಮ್ಸ್ ಮತ್ತು ಜೂನ್ 13ರಂದು ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಿಂದಲೂ ಅವರು ಹೊರಗುಳಿಯಬೇಕಾಗಿತ್ತು.
Advertisement
Advertisement
ಇದೀಗ ಸ್ವಿಡ್ಜರ್‌ಲ್ಯಾಂಡ್‌ನ ಲೌಸನ್ನೆಯಲ್ಲಿ ನಡೆದ ಲೀಗ್ ಫೈನಲ್‌ನಲ್ಲಿ 87.66 ಮೀಟರ್ ದೂರಕ್ಕೆ ಜಾವೆಲಿನ್ ಎಸೆದ (Javelin Throw) ನೀರಜ್, ಅಗ್ರಸ್ಥಾನದೊಂದಿಗೆ ಆಟ ಮುಗಿಸಿದ್ದಾರೆ. ನೀರಜ್ ಮೊದಲ ಪ್ರಯತ್ನದಲ್ಲೇ ಫೌಲ್ ಮಾಡಿದರು. 2ನೇ ಪ್ರಯತ್ನದಲ್ಲಿ 83.52 ಮೀಟರ್ ದೂರ ಜಾವೆಲಿನ್ ಎಸೆದರು. 3ನೇ ಪ್ರಯತ್ನದಲ್ಲಿ 85.04 ಮೀಟರ್ ದೂರ ಜಾವೆಲಿನ್ ಥ್ರೋ ಮಾಡಿದರೆ, ನಾಲ್ಕನೇ ಪ್ರಯತ್ನದಲ್ಲಿ ಮತ್ತೆ ಫೌಲ್ ಮಾಡಿದರು. ಆದರೆ 5ನೇ ಪ್ರಯತ್ನದಲ್ಲಿ ನೀರಜ್ 87.66 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಅಗ್ರಸ್ಥಾನ ಕಾಯ್ದುಕೊಂಡರು.
ಜರ್ಮನಿಯ ಜೂಲಿಯನ್ ವೆಬರ್ ಮತ್ತು ಜಕುಬ್ ವಡ್ಲೆಜ್ ತಮ್ಮ ಅಂತಿಮ ಪ್ರಯತ್ನಗಳಲ್ಲಿ ಕ್ರಮವಾಗಿ 87.03 ಮೀ ಹಾಗೂ 86.13 ಮೀ ದಾಖಲಿಸಿ 2 ಮತ್ತು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್ ತಂಡ
ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಭಾರತದ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ಅವರು ಲಾಸನ್‌ನಲ್ಲಿ ನಡೆದ ಡೈಮಂಡ್ ಲೀಗ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. 89.04 ಮೀ. ಜಾವೆಲಿನ್ ಎಸೆಯುವ ಮೂಲಕ ಮೊದಲ ಸ್ಥಾನ ಪಡೆದು, ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಗೌರವಕ್ಕೆ ನೀರಜ್ ಪಾತ್ರರಾಗಿದ್ದರು.
Web Stories