– ಭಾರತ ತಂಡಕ್ಕೆ ಸರಣಿ ಕೈವಶ
ಇಂದೋರ್: ಆಫ್ಘಾನಿಸ್ತಾನ ವಿರುದ್ಧದ ಟಿ20 (T20I) ಸರಣಿಯ 2ನೇ ಪಂದ್ಯ ಗೆದ್ದು, ಭಾರತ 2-0 (IND vs AFG) ಮುನ್ನಡೆ ಸಾಧಿಸಿದೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.
Advertisement
Advertisement
173 ರನ್ ಟಾರ್ಗೆಟ್ ಬೆನ್ನತ್ತಿದ ಭಾರತ 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸಿತು. ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅರ್ಧ ಶತಕ ಬಾರಿಸಿ ಗೆಲುವಿನ ರೂವಾರಿಯಾದರು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್
Advertisement
Advertisement
34 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಜೈಸ್ವಾಲ್ 68 ರನ್ ಬಾರಿಸಿ ಔಟಾದರು. 32 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 63 ರನ್ ಬಾರಿಸಿ ಅಜೇಯರಾಗಿ ಉಳಿದರು. ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲೂ ಶೂನ್ಯ ಸಂಪಾದಿಸಿದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 29 ರನ್ ಗಳಿಸಿದರು.
ಆಫ್ಘನ್ ತಂಡದ ಪರವಾಗಿ ಕರೀಂ ಜನತ್ 2 ವಿಕೆಟ್ ಪಡೆದರೆ, ಫಝಲ್ ಹಖ್ ಫರೂಖಿ ಹಾಗೂ ನವೀನ್ ಉಲ್ ಹಖ್ ತಲಾ 1 ವಿಕೆಟ್ ಪಡೆದರು. ಇದನ್ನೂ ಓದಿ: ಅಂಧ ಮಹಿಳೆಯರ ಕಣ್ಣಲ್ಲಿ ಗೆಲುವಿನ ಹೊಳಪು – ನ್ಯಾಷನಲ್ T20 ಕ್ರಿಕೆಟ್ ಟೂರ್ನಿಯಲ್ಲಿ ಒಡಿಶಾ ಚಾಂಪಿಯನ್
ಟಾಸ್ ಸೋತು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಆಫ್ಘನ್ ತಂಡದ ಪರವಾಗಿ ಗುಲಬ್ದೀನ್ ನಯೀಬ್ 35 ಬಾಲ್‌ನಲ್ಲಿ 57 ರನ್ ಬಾರಿಸಿದರು. ಟೀಂ ಇಂಡಿಯಾ ಪರವಾಗಿ ಆರ್ಷದೀಪ್ ಸಿಂಗ್ ಮೂರು ವಿಕೆಟ್ ಉರುಳಿಸಿದರು.
ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಗೆದ್ದಿತ್ತು. ಸರಣಿಯ ಕೊನೆಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17ರಂದು ನಡೆಯಲಿದೆ. ಇದನ್ನೂ ಓದಿ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!