Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಅಲೆಯನ್ನೂ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3ನೇ ಅಲೆಯನ್ನೂ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧಾರ

Bengaluru City

3ನೇ ಅಲೆಯನ್ನೂ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧಾರ

Public TV
Last updated: May 10, 2021 8:35 pm
Public TV
Share
3 Min Read
ashwathnarayan
SHARE

– ಪ್ರಾಥಮಿಕ, ಸಮುದಾಯ, ತಾಲೂಕು & ಜಿಲ್ಲಾಸ್ಪತ್ರೆಗಳಿಗೆ ಹೆಚ್ಚೆಚ್ಚು ಮೂಲಸೌಕರ್ಯ
– ಆರೋಗ್ಯ ಇಲಾಖೆ ಉನ್ನತಾಧಿಕಾರಿಗಳ ಜತೆ ಡಿಸಿಎಂ ಚರ್ಚೆ

ಬೆಂಗಳೂರು: ಈಗಿನದು ಸೇರಿದಂತೆ ಸಂಭನೀಯ 3ನೇ ಅಲೆಯನ್ನೂ ಎದುರಿಸಲು ಸಾಧ್ಯವಾಗುವಂತೆ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಹೆಜ್ಜೆ ಇಟ್ಟಿರುವ ಸರ್ಕಾರ, ತಾಲೂಕು ಆಸ್ಪತ್ರೆಗಳೂ ಸೇರಿ ಹಳ್ಳಿಯ ವಿವಿಧ ಹಂತಗಳಲ್ಲೇ 8,105 ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ashwathnaryan

ಬೆಂಗಳೂರಿನಲ್ಲಿ ಸೋಮವಾರ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಜೊತೆ ಮಾತುಕತೆ ನಡೆಸಿದ ಡಿಸಿಎಂ ರಾಜ್ಯದ 146 ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ತಲಾ 4ರಿಂದ 6 ಐಸಿಯು ಬೆಡ್‍ಗಳಿವೆ. ಇವುಗಳನ್ನು 20ಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಟ್ಟು 1,925 ಐಸಿಯು ಬೆಡ್‍ಗಳು ಲಭ್ಯವಾಗುತ್ತವೆ. ಜೊತೆಗೆ, ರಾಜ್ಯಾದ್ಯಂತ 206 ಸಮುದಾಯ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ಈಗ 30 ಸಾಮಾನ್ಯ ಬೆಡ್‍ಗಳಿವೆ. ಅವೆಲ್ಲವನ್ನೂ ಆಕ್ಸಿಜನ್ ಬೆಡ್‍ಗಳನ್ನಾಗಿ ಪರಿವರ್ತಿಸಲಾಗುವುದು. ಆಗ ಒಟ್ಟು 6,180 ಆಕ್ಸಿಜನ್ ಬೆಡ್‍ಗಳು ಸಿಗುತ್ತವೆ. ಪ್ರತಿ ಸಮುದಾಯ ಕೇಂದ್ರದ 30 ಬೆಡ್‍ಗಳ ಪೈಕಿ 5 ಬೆಡ್‍ಗಳನ್ನು ಅಧಿಕ ಆಮ್ಲಜನಕ ಸಾಂದ್ರತೆ (ಹೆಡೆನ್ಸಿಟಿ ಆಕ್ಸಿಜನ್) ಯುಳ್ಳ ಬೆಡ್‍ಗಳನ್ನಾಗಿ ಮಾಡಲಾಗುವುದು. ಜೊತೆಗೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 50 ಐಸಿಯು ಬೆಡ್‍ಗಳ ವ್ಯವಸ್ಥೆ ಮಾಡಲಾಗುವುದು. ಎರಡನೇ ಅಲೆಯಲ್ಲಿ ನಾವು ತತ್ತರಿಸಿದ್ದೇವೆ. 3ನೇ ಅಲೆಯ ಬಗ್ಗೆ ಅಲಕ್ಷ್ಯ ಮಾಡುವುದು ಬೇಡ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದು ಬೇಡ. ಹಳ್ಳಿ ಮಟ್ಟದಿಂದಲೇ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತಾ ಬರಬೇಕು ಎಂದರು.

ashwathnarayan 2

ವಾರ್ ರೂಂಗೆ ವ್ಯಾಕ್ಸಿನೇಷನ್ ಲಿಂಕ್:
ಈಗ 18ರಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯ ಶುರುವಾಗಿದೆ. ಎಲ್ಲರಿಗೂ ತಪ್ಪದೇ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಕೋವಿಡ್ ವಾರ್ ರೂಂಗೆ ಕೋವಿಡ್ ವ್ಯಾಕ್ಸಿನೇಷನ್ ಮಾಹಿತಿಯನ್ನು ಕೂಡ ಅಪ್‍ಲೋಡ್ ಮಾಡಲಾಗುವುದು. ಎಲ್ಲ ಮಾಹಿತಿಯೂ ಅಲ್ಲಿ ಸಿಗಬೇಕು ಎಂದು ಅವರು ಮಾಹಿತಿ ಕೊಟ್ಟರು.

ಆಕ್ಸಿಜನ್ ಸಾಂದ್ರಕ ಖರೀದಿ:
ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳನ್ನು (ಆಕ್ಸಿಜನ್ ಕಾನ್ಸನ್‍ಟ್ರೇಟರ್) ಖರೀದಿಗೆ ಆದೇಶ ಕೊಡಲಾಗಿದೆ. ಇನ್ನು 10,000 ಖರೀದಿಗೆ ಬೇಡಿಕೆ ಸಲ್ಲಿಸುವಂತೆ ಸೂಚಿಸಿದ್ದೇನೆ. ಈಗ ಪ್ರತಿ ದಿನ 40,000 ರಾಟ್ ಕಿಟ್ ದಿನಕ್ಕೆ ಪೂರೈಕೆ ಆಗತ್ತಿವೆ. ಇನ್ನೂ ಹೆಚ್ಚು ಖರೀದಿಗೆ ಟೆಂಡರ್ ಕರೆಯಲಾಗುತ್ತಿದೆ. ಇದೇ ವೇಳೆ 5 ಲಕ್ಷ ಡೋಸ್ ರೆಮಿಡಿಸಿವರ್ ಖರೀದಿಗೆ ಗ್ಲೋಬಲ್ ಟೆಂಡರ್ ಕರೆಯಲಾಗಿದೆ ಎಂದರು.

ವೈದ್ಯ ವಿದ್ಯಾರ್ಥಿಗಳ ನಿಯೋಜನೆ:
ಅಂತಿಮ ವರ್ಷದ ವೈದ್ಯಕೀಯ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರು ಅಗತ್ಯವಿದ್ದು, ಕೂಡಲೇ ವೈದ್ಯ ಶಿಕ್ಷಣ ಇಲಾಖೆ ಜೊತೆ ಮಾತನಾಡುವಂತೆ ಜಾವೇದ್ ಅಖ್ತರ್ ಅವರಿಗೆ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವೈದ್ಯರಿಗೆ ಒತ್ತಡ ಹೆಚ್ಚಾಗಿದ್ದು, ಅದನ್ನು ತಗ್ಗಿಸಲು ವೈದ್ಯ ವಿದ್ಯಾರ್ಥಿಗಳ ಸೇವೆ ಅತ್ಯಗತ್ಯವಾಗಿದೆ. ಲ್ಯಾಬ್‍ಗಳಿಗೆ ಸ್ಯಾಂಪಲ್ಸ್ ಕೊಡಬೇಕಾದರೆ 500 ಸ್ಯಾಂಪಲ್ಸ್‍ಗೂ ಒಂದೇ ಮೊಬೈಲ್ ಸಂಖ್ಯೆ ಕೊಟ್ಟಿರುವ ಅಂಶ ಬೆಳಕಿಗೆ ಬಂದಿದೆ. ಇನ್ಮೇಲೆ ಹಾಗೆ ಮಾಡಬಾರದು. ಸಾಸ್ಟ್ ಪೋರ್ಟಲ್ ನಲ್ಲಿಯೇ ಐದು ಜನಕ್ಕಿಂತ ಹೆಚ್ಚು ಜನರ ಸ್ಯಾಂಪಲ್ ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗದಂತೆ ಬದಲಾವಣೆ ಮಾಡಲಾಗುತ್ತದೆ. ಇನ್ನು, ಟೆಲಿಫೋನಿಕ್ ಟ್ರಾಯಾಜಿಕ್ ಮಾಡಬಹುದು ಅಂತ ಕೆಲವರು ಹೇಳುತ್ತಿದ್ದಾರೆ. ಅದು ಬೇಡವೆಂದು ತಿಳಿಸಿದ್ದೇನೆ. ಭೌತಿಕ ಪರೀಕ್ಷೆಯೇ ಮಾಡಬೇಕು ಎಂದು ಅವರು ವಿವರಗಳನ್ನು ಕೊಟ್ಟರು.

ashwatnrayan

ತಕ್ಷಣವೇ ಮಂಗಳೂರು ವೆನ್‍ಲಾಕ್ ಆಸ್ಪತ್ರೆಗೆ 50 ವೆಂಟಿಲೇಟರ್ ಕೊಡುವಂತೆ ಸೂಚನೆ ಕೊಟ್ಟಿದ್ದೇನೆ. ಆ ಭಾಗದಲ್ಲಿ ಸೋಂಕು ಉಲ್ಬಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಒತ್ತಡ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕಿತ್ಸೆ ಮತ್ತು ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ಮಾರ್ಗಸೂಚಿನ್ನೇ ಪಾಲಿಸಬೇಕು. ನಗರ ಮತ್ತು ಸ್ಥಳೀಯ ಸಂಸ್ಥೆಗಳು ಮಾರ್ಗಸೂಚಿ ಮಾಡುವಂತಿಲ್ಲ. ಐಸಿಎಂಆರ್, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿ ಮಾಡುವ ಮಾರ್ಗಸೂಚಿಯೇ ಅಂತಿಮ ಎಂದು ಸ್ಪಷ್ಟ ಪಡಿಸಿದರು.

TAGGED:Ashwath NarayanCoronaCoronavirusCovid 19hospitalkarnatakaPublic TVಅಶ್ವತ್ಥನಾರಾಯಣಆಸ್ಪತ್ರೆಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
4 hours ago
01 13
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-1

Public TV
By Public TV
5 hours ago
02 14
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-2

Public TV
By Public TV
5 hours ago
03 12
Big Bulletin

ಬಿಗ್‌ ಬುಲೆಟಿನ್‌ 19 February 2026 ಭಾಗ-3

Public TV
By Public TV
5 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
5 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?