3 ತಿಂಗ್ಳ ಹಿಂದೆಯಷ್ಟೇ ಪ್ರೀತಿಸಿ ಮದ್ವೆ – ಕೆಲಸದಿಂದ ಬಂದು ಪತ್ನಿಯನ್ನ ನೋಡಿ ಪತಿಯೂ ಆತ್ಮಹತ್ಯೆ

Public TV
1 Min Read
suicide 2

ಚೆನ್ನೈ: ಮೂರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮನೆಯವರ ವಿರೋಧವಾಗಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ಈರೋಡ್ ಜಿಲ್ಲೆಯಲ್ಲಿ ನಡೆದಿದೆ.

ಇಲಂಗೋವನ್ (23) ಮತ್ತು ರಮ್ಯಾ (23) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತ್ನಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದನು ನೋಡಿ ಪತಿಯೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆರೆಮನೆಯವರು ಬಾಗಿಲು ಒಡೆದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

True Love 1024x626 1

ಇಲಂಗೋವನ್ ಮತ್ತು ರಮ್ಯಾ ಒಂದೇ ವಯಸ್ಸಿನವರಾಗಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರು. ಹೀಗಾಗಿ ಇವರ ಪ್ರೀತಿಗೆ ಎರಡು ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ ಜೋಡಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು. ನಂತರ ಮನೆ ಬಾಡಿಗೆಗೆ ಪಡೆದು ದಂಪತಿ ವಾಸಿಸುತ್ತಿದ್ದರು.

marriage fb 020419062152 1

ಇಲಂಗೋವನ್ ಟಿವಿ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದನು. ಸೋಮವಾರ ರಾತ್ರಿ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಿದ್ದಾನೆ. ಆದರೆ ಬಾಗಿಲು ತೆರೆದ ಕೂಡಲೇ ರಮ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ನೋಡಿದ ಪತಿ ಗಾಬರಿಗೊಂಡಿದ್ದಾನೆ. ನಂತರ ಭಯದಿಂದ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

room

ಮರುದಿನ ತುಂಬಾ ಸಮಯವಾದರೂ ದಂಪತಿ ಮನೆಯಿಂದ ಹೊರಗೆ ಬರದಿರುವುದನ್ನು ನೋಡಿ ನೆರೆಹೊರೆಯವರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದ್ದಾರೆ. ಆಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

love hand wedding valentine day together holding hand 38810 3580 medium

ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ರಮ್ಯಾಳಿಗೆ ಇಲಂಗೋವನ್ ಯಾವುದೋ ವಿಚಾರಕ್ಕೆ ಬೈದಿದ್ದನು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯಕ್ಕೆ ಇಬ್ಬರ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

police 1

Share This Article
Leave a Comment

Leave a Reply

Your email address will not be published. Required fields are marked *