– ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ
– ಭಕ್ತಾದಿಗಳಿಗೆ ವಿಶೇಷ ಸುರಕ್ಷೆ ನೀಡಲು ಕರೋನಾ ಕಿಲ್ಲರ್ ಯಂತ್ರ ಅಳವಡಿಕೆ
– ಒಂದು ವಾರದ ಬಳಿಕ ಒಂದು ಲಕ್ಷ ಕುಟುಂಬಕ್ಕೆ ಹಂಚುವ ನಿರ್ಧಾರ
– ಸಂಸದ ತೇಜಸ್ವೀ ಸೂರ್ಯ ಅವರಿಂದ ಶ್ಲಾಘನೆ
ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ ಇಂದು ಜೆಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು.
Advertisement
ಕೊರೊನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷ ವಾದ ಆಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿಕ ಆಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತುಕೊಳ್ಳಲಾಯಿತು. 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಹಾಗೂ ರೇಷನ್ ಕಿಟ್ ನಲ್ಲಿ ಇರುವಂತಹ ಪದಾರ್ಥಗಳಿಂದ ಆಲಂಕಾರ ಮಾಡಿದ್ದೇವೆ. ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.
Advertisement
Advertisement
ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವೀ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಆಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಆಲಂಕಾರವೂ ಆಗುತ್ತದೆ ಹಾಗೆಯೇ ನಂತರ ಅದರ ಸದುಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ಮಾಜಿ ಉಪಮಹಾಪೌರರಾದ ರಾಮ ಮೋಹನ ರಾಜ್ ಅವರ ಕಾರ್ಯ ಶ್ಲಾಘನೀಯ ಎಂದರು. ಇದನ್ನೂ ಓದಿ: ದೊಡ್ಮನೆಯಲ್ಲಿ ಮತ್ತೊಮ್ಮೆ ಅರವಿಂದ್‍ಗೆ ಸಿಕ್ತು ಬಿಗ್‍ಬಾಸ್ ಪಟ್ಟ
Advertisement
ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತೆ ಕವಿತಾ ಮಾತನಾಡಿ, ಲಾಕ್‍ಡೌನ್ ನಲ್ಲಿ ಮನೆಯಿಂದ ಹೊರಗೆ ಹೋಗದೆ ಬಹಳಷ್ಟು ಬೇಸರಕ್ಕೀಡಾಗಿದ್ದೇವು. ಲಾಕ್‍ಡೌನ್ ಸಡಲಿಕೆಗೊಂಡ ನಂತರ ಇಂತಹ ವಿಭಿನ್ನ ಆಲೋಚನೆಯ ಆಲಂಕಾರ ಮಾಡಿರುವ ದೇವಸ್ಥಾನಕ್ಕೆ ಭೇಟಿ ನೀಡದ್ದು ಸಂತಸವಾಯಿತು ಎಂದು ಹೇಳಿದರು. ಇದನ್ನೂ ಓದಿ: RRR ಆಡಿಯೋ ರೈಟ್ಸ್ ಲಹರಿ ಪಾಲು