ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಭರ್ಜರಿ ಕಾಣಿಕೆ; 3.48 ಕೋಟಿ ಕಾಣಿಕೆ ಸಂಗ್ರಹ

Public TV
0 Min Read
mantralaya raghavendra swami mutt hundi money counting

ರಾಯಚೂರು: ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ (Raghavendra swami Mutt) ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3,48,69,621 ರೂ. ಕಾಣಿಕೆ ಸಂಗ್ರಹವಾಗಿದೆ.

ಕಳೆದ 30 ದಿನಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,39,35,121 ರೂ. ನಗದು, 9,34,500 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ.

37.200 ಗ್ರಾಂ ಚಿನ್ನ, 1280 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಎರಡು ದಿನಗಳಿಂದ ಮಂತ್ರಾಲಯ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರಸೇವಕರು ಭಾಗವಹಿಸಿದ್ದರು.

Share This Article