ಕೋಲಾರ: ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ (Gold) ದೋಚಿದ್ದ ಪ್ರಕರಣದಲ್ಲಿ ಮತ್ತೆ ಐವರನ್ನು ಕೆಜಿಎಫ್ ಪೊಲೀಸರು (KGF Police) ಬಂಧಿಸಿದ್ದಾರೆ.
ಬಂಧಿತರನ್ನು ತಮಿಳುನಾಡು (Tamil Nadu) ಮೂಲದ ಪಿ.ವೇದಾವಲಂ, ಕುಮಾರನ್, ರಂಜಿತ್, ಶಂಕರ್, ದೇಬೇಶ್ ಚಕ್ರವರ್ತಿ ಮತ್ತು ವೇಲು ಎಂದು ಗುರುತಿಸಲಾಗಿದೆ. ಇನ್ನೂ ಮೂರ್ನಾಲ್ಕು ಮಂದಿ ಪ್ರಕರಣದಲ್ಲಿ ಭಾಗಿಯಾಗಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:
ಪ್ರಕರಣದ 8ನೇ ಆರೋಪಿ ಅಪ್ಪು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ತಮಿಳುನಾಡಿನ ಕಂಬಟ್ಟು ಬಳಿ ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಡದಿ ಪಟ್ಟಣದಲ್ಲಿ ಜೆಸಿಬಿಗಳ ಘರ್ಜನೆ – ಅಧಿಕಾರಿಗಳಿಂದ ಫುಟ್‌ಪಾತ್ ಒತ್ತುವರಿ ತೆರವು
ಏ.2 ರಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಸಂಬಂಧ ಕೆಜಿಎಫ್‍ನ ಚಿನ್ನದಂಗಡಿಯೊಂದರ ಮಾಲೀಕ ದೀಪಕ್ ಜೈನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಈಗಾಗಲೇ ಕೆಜಿಎಫ್ ಮೂಲದ ನಾಲ್ಕು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದನ್ನೂ ಓದಿ: ರಾಜೇಂದ್ರ ಕೊಲೆ ಸುಪಾರಿ ಕೇಸ್ – 9 ದಿನ ಕಳೆದರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸದ ಪೊಲೀಸರು