ವಿಜಯಪುರ: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಇಬ್ಬರು ಅಧಿಕಾರಿಗಳನ್ನು ಹಣದ ಜೊತೆಗೆ ಲೋಕಾಯುಕ್ತ ಪೊಲೀಸರು (Lokayuktha Police) ಅರೆಸ್ಟ್ ಮಾಡಿದ್ದಾರೆ.
ವಿಜಯಪುರ (Vijayapura) ಜಿಲ್ಲೆಯ ಸಾಲೋಟಗಿಯಲ್ಲಿ (Salotagi) ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: Shivamogga | ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಬಸ್ – 17 ಮಂದಿ ಪ್ರಯಾಣಿಕರು ಸೇಫ್
ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರರನ್ನ ಬಂಧಿಸಿದ್ದಾರೆ.
ಈ ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇದನ್ನೂ ಓದಿ: ದೆಹಲಿ ರೆಸ್ಟೋರೆಂಟ್‌ನಲ್ಲಿ ಅಗ್ನಿ ದುರಂತ – ಮತ್ತೊಬ್ಬ ಆರೋಪಿ ಬಂಧನ
