ಬೆಂಗಳೂರು: ಮಾಂಸದ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೀಪಕ್, ಕಾಶಿ ಹಾಗೂ ಪ್ರಜ್ವಲ್ ಬಂಧಿತರು. ಸಿಸಿಬಿ ಪೊಲೀಸರು ಈ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 5 ಮೊಬೈಲ್ ಹಾಗೂ 8 ಸಾವಿರ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅಲ್ಲದೆ ಹೊರ ರಾಜ್ಯದಿಂದ ಯುವತಿಯರನ್ನು ಕರೆ ತಂದು ದಂಧೆ ನಡೆಸುತ್ತಿದ್ದರು. ಇದನ್ನು ತಿಳಿದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಮೂವರು ಯುವತಿಯರನ್ನು ಕೂಡ ರಕ್ಷಿಸಿದ್ದಾರೆ.
ಸದ್ಯ ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.