ಲಕ್ನೋ: ಸ್ವಾತಂತ್ರ್ಯ ದಿನಾಚರಣೆಯಂದು ಆಗ್ರಾದ ಗೋಕುಲಪುರ ರಿಯಾದಲ್ಲಿ ‘ತಿರಂಗ ಯಾತ್ರೆ’ ಆಯೋಜಿಸಲಾಗಿತ್ತು. ಈ ವೇಳೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಆಗ್ರಾದ ಲೋಹಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲಪುರದಲ್ಲಿ ಆಗಸ್ಟ್ 15ರ ಸೋಮವಾರ ‘ತಿರಂಗ ಯಾತ್ರೆ’ ನಡೆಸಲಾಗುತ್ತಿದ್ದು, ರ್‍ಯಾಲಿ ವೇಳೆ ಕೆಲವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು. ಈ ಘಟನೆಯ ವೀಡಿಯೋವನ್ನು ಆಧಾರಿಸಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ ನಗರ) ವಿಕಾಸ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: Exclusive: ಮುಖಕ್ಕೆ ಮಾಸ್ಕ್ ಧರಿಸಿ ಕಲ್ಲು ಹೊಡೆಯಿರಿ – ಶಿವಮೊಗ್ಗ ಗಲಾಟೆಯ ಪ್ಲ್ಯಾನ್ ವೀಡಿಯೋ ಔಟ್
Advertisement
Advertisement
ಆರೋಪಿಗಳನ್ನು ಆಗ್ರಾ ನಗರದ ಗೋಕುಲಪುರ ನಿವಾಸಿಗಳಾದ ಫೈಜಾನ್, ಸದಾಬ್ ಮತ್ತು ಮುಹಜ್ಜಮ್ ಎಂದು ಗುರುತಿಸಲಾಗಿದ್ದು, ಈ ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 153-ಬಿ (ರಾಷ್ಟ್ರೀಯ ಸಮಗ್ರತೆಗೆ ಬಾಧಕವಾಗುವ ಆರೋಪಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೂವರು ಯುವಕರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದಿದ್ದಾರೆ.
Advertisement
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೋಹಮಂಡಿ ಪೊಲೀಸ್ ಠಾಣೆಯ ಎಸ್‍ಎಚ್‍ಒ ತ್ರಿಲೋಕಿ ಸಿಂಗ್ ಅವರು, ಯುವಕರನ್ನು ಮಂಗಳವಾರ ಬಂಧಿಸಲಾಗಿದ್ದು, ಅವರ ಅವರ ವಯಸ್ಸು 19 ರಿಂದ 21 ವರ್ಷಗಳಿರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು