ಚಿಕ್ಕಬಳ್ಳಾಪುರ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ದೇವನಹಳ್ಳಿಯ (Devanahalli) ಚಿಕ್ಕನಹಳ್ಳಿ ಕೆರೆಯಲ್ಲಿ ನಡೆದಿದೆ.
ಬಸವನಗರದ (Basavanagar) ಕಾರ್ತಿಕ್ (16), ಧನುಷ್ (15) ಹಾಗೂ ಗುರುಪ್ರಸಾದ್ (8) ಮೃತ ಬಾಲಕರು. ಶನಿವಾರ ಶಾಲೆ ಮುಗಿಸಿ ಕೆರೆಯ ಬಳಿ ಮೀನು ಹಿಡಿಯಲು ಹೋದ ಬಾಲಕರು ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾರೆ. ಆದರೆ ಪೋಷಕರಿಗೆ ಇದು ಅರಿವಿಗೆ ಬಂದಿರಲಿಲ್ಲ. ಪೊಲೀಸ್ ಠಾಣೆಯಲ್ಲಿ ಮಕ್ಕಳು ಕಾಣೆಯಾಗಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ಬಳಿಕ ಹುಡುಕಾಟ ಆರಂಭಿಸಿದ್ದರು. ಇದನ್ನೂ ಓದಿ: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮತ್ತೋರ್ವ ಯುವಕ ಬಲಿ
Advertisement
Advertisement
ಭಾನುವಾರ ಬೆಳಗ್ಗೆ ಕೆರೆಯ ಬಳಿ ಬಾಲಕರ ಸೈಕಲ್ ಹಾಗೂ ಚಪ್ಪಲಿಗಳು ಪತ್ತೆಯಾಗಿತ್ತು. ಬಳಿಕ ಹುಡುಕಾಟ ನಡೆಸಿದಾಗ ದುರ್ಘಟನೆ ಬೆಳಕಿಗೆ ಬಂದಿದೆ. ಬಾಲಕರ ಮೃತ ದೇಹಗಳು ಪತ್ತೆಯಾಗುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Advertisement
Advertisement
ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅವರಿಗೆ ಸಚಿವರಾಗಿ ಕೆಲಸ ಮಾಡೋದಕ್ಕಿಂತ ಬೇರೆಯದ್ದರ ಬಗ್ಗೆಯೇ ಆಸಕ್ತಿ ಜಾಸ್ತಿ: ಮಹದೇವಪ್ಪಗೆ ಸುರೇಶ್ ಟಾಂಗ್