ಚಂಡೀಗಢ: ಚಲಿಸುತ್ತಿದ್ದ ಎಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವವಾಗಿ ದಹನವಾದ ಮನಕಲಕುವ ಘಟನೆ ಪಂಜಾಬ್‍ನ ಬಾಥಿಂಡಾದ 35 ಕಿ.ಮೀ ದೂರದ ರಾಂಪುರ್ ಪುಲ್‍ನಲ್ಲಿ ಶನಿವಾರ ಸಂಜೆ ನಡೆದಿದೆ.
ರೈಯಾ ಸಾರಿಗೆ ಕಂಪೆನಿ(ಆರ್‍ಟಿಸಿ) ಎಂಬ ಖಾಸಗಿ ಕಂಪೆನಿಗೆ ಸೇರಿದ ಬಸ್ ಇದಾಗಿದ್ದು, ಬಾಥಿಂಡಾದಿಂದ ಲೂದಿಯಾನದ ಕಡೆ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 23 ಮಂದಿಗೆ ಗಾಯಗಳಾಗಿವೆ.
Advertisement
ಮೊದಲು ಬಸ್ ನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ಬಸ್ ನಿಂದ ಹೊರಗಿಳಿದಿದ್ದಾರೆ. ಆದ್ರೆ ಈ ವೇಳೆಗಾಗಲೇ ಬೆಂಕಿ ಬಸ್ಸನ್ನು ಸಂಪೂರ್ಣವಾಗಿ ಆವರಿಸಿಕೊಂಡಿದ್ದು, ಮೂವರು ಸಜೀವ ದಹನವಾಗಿದ್ದಾರೆ. ಮೃತರ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಕೂಡಲೇ ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಎರಡು ಗಂಡೆಗಳ ಕಾಲ ಬೆಂಕಿ ನಂದಿಸಲು ಹರಸಾಹಸಪಟ್ಟರು.
Advertisement
Advertisement
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್ ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ದರು ಹಾಗೂ ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನೆಂದು ನಿಖರವಾಗಿ ತಿಳಿದುಬಂದಿಲ್ಲ. ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಚಾಲಕ ಬಸ್ ನಿಂದ ಹಾರಿದ್ದು, ಸ್ಥಳದಲ್ಲೇ ಸಾವನಪ್ಪಿದ್ದಾರೆ.
Advertisement
ಬಸ್ ಚಲಿಸುತ್ತಿದ್ದಂತೆಯೇ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರವೂ 300 ಮೀಟರ್ ವರೆಗೆ ಬಸ್ ಚಲಿಸುತ್ತಲೇ ಇತ್ತು ಅಂತಾ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.