ಕೋಲ್ಕತ್ತಾ (ಹೌರಾ): ಪಶ್ಚಿಮ ಬಂಗಾಳದ (West Bengal) ಹೌರಾದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌರಾದ (Howrah) ಉಲುಬೇರಿಯಾ ಪಟ್ಟಣದಲ್ಲಿ ಕಾಳಿ ಪೂಜೆ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9, 14 ಮತ್ತು 2.5 ವರ್ಷದ ಮೂವರು ಮಕ್ಕಳು ಸಾವನ್ನಪ್ಪಿರುವುದಾಗಿ ಅಗ್ನಿಶಾಮಕ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ
Advertisement
Advertisement
ಬೆಂಕಿ ಅವಘಡ ಸಂಭವಿಸಿದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಪ್ರಯತ್ನ ಮಾಡಿದವು. ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಜೀವ ತೆತ್ತಿದ್ದರು. ಬೆಂಕಿ ನಂದಿಸಿದ ಬಳಿಕ ಸಿಬ್ಬಂದಿ ಹೌರಾದ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಘೋಷ್ ಅವರು ಮೂರು ಮಕ್ಕಳ ಸುಟ್ಟ ದೇಹಗಳನ್ನು ಹೊರಕ್ಕೆ ತಂದರು. ಸದ್ಯ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.
Advertisement
Advertisement
ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ:
ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ ಹೊರತಾಗಿಯೂ ಆ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಬಗ್ಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದವರು ತಮ್ಮ ಕೆಲಸವನ್ನ ಪರಿಣಾಮಕಾರಿಯಾಗಿ ಮಾಡದೇ ಇದ್ದಿದ್ದರೆ ಘಟನೆಯಲ್ಲಿ ಹೆಚ್ಚಿನ ಮನೆಗಳು ಸುಟ್ಟುಹೋಗುವ ಸಾಧ್ಯತೆಯಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಮೆರಿಕಾ ಚುನಾವಣೆಯಲ್ಲೂ ಹಿಂದೂ ಅಸ್ತ್ರ ಪ್ರಯೋಗ – ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಟ್ರಂಪ್