ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ಮೂವರು ನಾಗರಿಕರ ಹತ್ಯೆಯಾಗಿದೆ. ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ.
ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ನಾಗರಿಕರು ಹತ್ಯೆಯಾಗಿದ್ದಾರೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಪ್ರತಿಭಟನೆಗಳನ್ನು ತಡೆಗಟ್ಟಲು ಬಫ್ಲಿಯಾಜ್ ಮತ್ತು ಸುರನ್‌ಕೋಟೆ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಬಫ್ಲಿಯಾಜ್‌ಗೆ ಹೋಗುವ ರಸ್ತೆಗಳನ್ನು ಸಹ ಮುಚ್ಚಲಾಗಿದೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ವ್ಯಾಪಾರಿ ಹಡಗಿನ ಮೇಲೆ ಡ್ರೋಣ್ ದಾಳಿ
Advertisement
Advertisement
ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಸರ್ಕಾರ, ಕುಟುಂಬಗಳಿಗೆ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
Advertisement
ಸೇನೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಶೋಧ ಕಾರ್ಯಗಳು ನಡೆಯುತ್ತಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಸೇನೆಯು ತಿಳಿಸಿದೆ. ಇದನ್ನೂ ಓದಿ: ಗಡಿಯಲ್ಲಿ ನುಸುಳಲು ಯತ್ನಿಸಿದ ಉಗ್ರನ ಹತ್ಯೆ – ದೇಹವನ್ನು ಪಾಕ್ ಕಡೆಗೆ ಎಳೆದೊಯ್ದ ಸಹಚರರು
Advertisement
ದಾಳಿಯ ಹಿಂದಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ನಡೆಯುತ್ತಿರುವ ಕಾರ್ಯಾಚರಣೆಯ ಮಧ್ಯೆ, ಬುಫ್ಲಿಯಾಜ್ ಪ್ರದೇಶದಲ್ಲಿ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗಾಗಿ ಹತ್ತಿರದ ಮಿಲಿಟರಿ ಠಾಣೆಗೆ ಕರೆದೊಯ್ಯಲಾಯಿತು. ಇದರ ಬೆನ್ನಲ್ಲೇ ಶೋಕತ್ ಹುಸೇನ್ ಮತ್ತು ರೆಯಾಜ್ ಅಹ್ಮದ್, ಮೊಹಮ್ಮದ್ ಸಫೀರ್ ಎಂಬ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಅಪ್ನಿ ಪಕ್ಷವು ನಾಗರಿಕ ಹತ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಿತು. ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿತು. ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಪತ್ರಿಕಾಗೋಷ್ಠಿಯಲ್ಲಿ, ಮೃತರ ದೇಹಗಳಲ್ಲಿ ಚಿತ್ರಹಿಂಸೆಯ ಗುರುತುಗಳಿದ್ದವು. ಕೆಲವು ಗ್ರಾಮಸ್ಥರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್