ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
Advertisement
ಬುಧವಾರ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಬೆಳಗ್ಗೆ 11:35ರ ಸುಮಾರಿಗೆ ರಾಹುಲ್ ಗಾಂಧಿ ಆಗಮಿಸಿದರು. ವಿಚಾರಣೆಯ ಮೊದಲ ದಿನ ಸೋಮವಾರದಿಂದ ಸುಮಾರು 30 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ. ಗುರುವಾರ 1 ದಿನದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಸಂಸದರು ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಆಗ್ತಿದೆ: ನಲಪಾಡ್
Advertisement
ರಾಹುಲ್ ಗಾಂಧಿ ವಿಚಾರಣೆ ವೇಳೆ ಇಡಿ ಕಚೇರಿಯ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ 3 ದಿನವೂ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಬೆಂಬಲಿಸಿ, ಘೋಷಣೆ ಕೂಗಿದ್ದಾರೆ.
Advertisement
Advertisement
ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಮಾತ್ರವಲ್ಲದೇ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನೂ ಬಿಡದೆ ಪೊಲೀಸರು ಬಸ್‌ಗಳಲ್ಲಿ ಎಳೆದೊಯ್ದಿದ್ದಾರೆ. ಈ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಟೀಕೆಗೆ ಗ್ರಾಸವಾಗುತ್ತಿದೆ. ಇದನ್ನೂ ಓದಿ: ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ