ನನ್ನ ಪತಿಯನ್ನ ಕೊಂದಿದ್ದು ಪುಟಿನ್‌ – ಮೃತ ಅಲೆಕ್ಸಿ ನವಲ್ನಿ ಪತ್ನಿ ಕಣ್ಣೀರು!

Public TV
2 Min Read
Alexei Navalny 2

ಮಾಸ್ಕೋ: ಅಲೆಕ್ಸಿ ನವಲ್ನಿ (Alexei Navalny) ನಿಗೂಢ ಸಾವಿನ ಕುರಿತು ಅವರ ಪತ್ನಿ ಯೂಲಿಯಾ ನವಲ್ನಾಯಾ, ರಷ್ಯಾ ಅಧ್ಯಕ್ಷ ಪುಟಿನ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವ್ಲಾಡಿಮಿರ್‌ ಪುಟಿನ್‌ (Vladimir Putin) ತನ್ನ ಪತಿಯನ್ನ ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಸೋಮವಾರ (ಫೆ.19) ಬಿಡುಗಡೆಯಾದ ವೀಡಿಯೋವೊಂದರಲ್ಲಿ ನವಲ್ನಿ ಪತ್ನಿ ಕಣ್ಣೀರಿಡುತ್ತಲೇ ಮಾತನಾಡಿದ್ದಾರೆ. ಪುಟಿನ್‌ ತನ್ನ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದರು. ಅದರಂತೆ ನನ್ನ ಪತಿಯನ್ನು ಕೊಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

RUSSIA ARREST

ನವಲ್ನಿ ಮೃತಪಟ್ಟಿದ್ದು ಹೇಗೆ?
ಪುಟಿನ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಅಲೆಕ್ಸಿ ನಾವಲ್ನಿ ಅವರನ್ನು ಉಗ್ರವಾದದ ಆರೋಪದ ಮೇಲೆ 2021ರಲ್ಲಿ ಜೈಲಿಗಟ್ಟಲಾಗಿತ್ತು. ಮಾಸ್ಕೋದ ಯಮಲೊ ನೆನೆಟ್ಸ್‌ ಪ್ರಾಂತ್ಯದ ಜೈಲಿನಲ್ಲಿದ್ದ ಅಲೆಕ್ಸಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥಗೊಂಡರು. ಜೈಲಿನ ವೈದ್ಯಕೀಯ ಸಿಬ್ಬಂದಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಮಕ್ಕಳನ್ನು ಪಾಕ್‌ಗೆ ಕರೆದೊಯ್ಯಲು ಸೀಮಾ ಮೊದಲ ಪತಿ ನಿರ್ಧಾರ – ಕಾನೂನು ಹೋರಾಟಕ್ಕೆ ಭಾರತೀಯ ವಕೀಲರ ನೇಮಕ

RUSSIA

2021ರ ಜನವರಿಯಲ್ಲಿ ಅಲೆಕ್ಸಿ ನಾವಲ್ನಿ ಅವರಿಗೆ ಸೈಬೀರಿಯಾದಲ್ಲಿ ವಿಷ ಪ್ರಾಶನ ಮಾಡಲಾಗಿತ್ತು. ಕೋಮಾಗೆ ಜಾರಿದ್ದ ಅಲೆಕ್ಸಿ ಅವರಿಗೆ ಜರ್ಮನಿಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ರಷ್ಯಾಗೆ ಕರೆ ತರಲಾಗಿತ್ತು. ನಂತರ ಪೆರೋಲ್‌ ಉಲ್ಲಂಘಿಸಿದ ಆರೋಪದ ಮೇಲೆ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ನವಲ್ನಿ ಮೃತಪಟ್ಟ ಆರ್ಕ್ಟಿಕ್‌ ಜೈಲು (Arctic Jail) ಮಾಸ್ಕೋದಿಂದ ಈಶಾನ್ಯಕ್ಕೆ 1,200 ಕಿಮೀ ದೂರದಲ್ಲಿದೆ ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

400 ಮಂದಿ ಬಂಧನ:
ಇತ್ತೀಚೆಗೆ ಅಧ್ಯಕ್ಷ ಪುಟಿನ್ ಕಟ್ಟಾ ವಿರೋಧಿ ಅಲೆಕ್ಸಿ ನವಲ್ನಿ ಅವರು ಜೈಲಿನಲ್ಲಿ ಮೃತಪಟ್ಟ ಬಳಿಕ ರಷ್ಯಾದಲ್ಲಿ ಭಾರೀ ಕೋಲಾಹಲ ಉಂಟಾಗಿದೆ. ನವಲ್ನಿಗೆ ಗೌರವ ಸಲ್ಲಿಸಲು ಬೀದಿಗಿಳಿದಿದ್ದ ಸುಮಾರು 400 ಮಂದಿಯನ್ನು ಬಂಧಿಸಲಾಗಿದೆ. ರಷ್ಯಾದ ವಿವಿಧ ನಗರಗಳಲ್ಲಿ ನವಲ್ನಿಗೆ ಶ್ರದ್ಧಾಂಜಲಿ ಸಲ್ಲಿಸಲು ಜನರು ಬೀದಿಗಿಳಿದಿದ್ದರು. ಜೊತೆಗೆ ಕೈಯಲ್ಲಿ ಮೇಣದ ಬತ್ತಿ, ಬ್ಯಾನರ್, ಕರಪತ್ರಗಳನ್ನು ಹಿಡಿದುಕೊಂಡು ನವಲ್ನಿಯವರನ್ನು ಕೊಲೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿ ಪುಟಿನ್ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.

Share This Article