ಚಂಡೀಗಢ: ಅತೀ ವೇಗವಾಗಿ ಬಂದ ಸರಕು ಸಾಗಣೆ ಲಾರಿಯೊಂದು ರಸ್ತೆ ದುರಸ್ತಿ ಕೆಲಸ ಮುಗಿಸಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಹರಿದು ಮೂವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಜ್ಜರ್ ಬಳಿ ನಡೆದಿದೆ.
ಇಲ್ಲಿನ ಕುಂಡ್ಲಿ ಮನೇಸರ್ ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್- ವೇ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡ 11 ಮಂದಿ ಪೈಕಿ 10 ಮಂದಿಯನ್ನು PGIMS ಆಸ್ಪತ್ರೆಗೆ, ಗಂಭೀರ ಗಾಯಗೊಂಡ ಓರ್ವನನ್ನು ಬಹದ್ದೂರ್‌ಗಢ್‌ನ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್
ಅಪಘಾತಕ್ಕೆ ಒಳಗಾದವರು ಇಲ್ಲಿನ ಕೆಎಂಪಿ ಎಕ್ಸ್‌ಪ್ರೆಸ್-ವೇ ಹೆದ್ದಾರಿಯಲ್ಲಿ ರಸ್ತೆದುರಸ್ತಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ, ರಸ್ತೆ ಬದಿಯಲ್ಲೇ ಮಲಗಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಲಾರಿಯೊಂದು ಕಾರ್ಮಿಕರ ಮೇಲೆ ಹರಿದಿದೆ. ಇದನ್ನೂ ಓದಿ: ಚೇತನಾ ರಾಜ್ ಸಾವು: ಬಾಡಿ ಶೇಮಿಂಗ್ ವಿರುದ್ಧ ದನಿಯೆತ್ತಿದ ಅಶ್ವಿತಿ ಶೆಟ್ಟಿ
ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಹದ್ದೂರ್‌ಗಢ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.