ಮುಂಬೈ: ಮದ್ಯಪಾನ ಮಾಡಿ ಕಾರು ಚಲಾಯಿಸಿ (Drunk and Drive) ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಥಾಣೆಯ ಉಲ್ಲಾಸ್‍ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಸುಬುದ್ದೀನ್ ಜಾನಾ, ಅಂಜಲಿ ಜಾನಾ ಮತ್ತು ಶಂಭುರಾಜ್ ಚವ್ಹಾಣ್ ಎಂದು ಗುರುತಿಸಲಾಗಿದೆ. ಮೃತರು ಆಟೋ ಹಾಗೂ ಬೈಕ್‌ನಲ್ಲಿದ್ದರು. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ಯಪಾನ ಮಾಡಿ ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಈ ಅಪಘಾತ (Car Accident) ಸಂಭವಿಸಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆಗೆ ಓರ್ವ ಬಲಿ – ರೈಲ್ವೇ ನಿಲ್ದಾಣದಲ್ಲಿ ಸಿಲುಕಿದ 500ಕ್ಕೂ ಹೆಚ್ಚು ಪ್ರಯಾಣಿಕರು
ಅಪಘಾತದ ಬಳಿಕ ಕಾರಿನ ಚಾಲಕ ನಾಗೇಶ್ ರಮಣಿ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯಪಾನ ಮಾಡಿ ಕಾರು ಚಲಾಯಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಡ್ರಂಕ್ ಅಂಡ್ ಡ್ರೈವ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣವಾಗುತ್ತಿದೆ ಎಂದು ಆತಂಕಗೊಳ್ಳುವುದು ಬೇಡ: ಡಿ.ಕೆ ಶಿವಕುಮಾರ್