ಪಾಟ್ನಾ: ಕೆಲ ದಿನಗಳ ಹಿಂದೆ ಬಿಹಾರದಲ್ಲಿ (Bihar) ಕಳ್ಳಭಟ್ಟಿ (Spurious Liquor) ಸೇವಿಸಿ 70ಕ್ಕೂ ಅಧಿಕ ಜನರು ಸಾವನ್ನಪ್ಪಿ ದೊಡ್ಡ ದುರಂತವೇ ಎನಿಸಿಕೊಂಡಿತ್ತು. ಇದೀಗ ಮತ್ತೆ ಕಳ್ಳಭಟ್ಟಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದ ಸಿವಾನ್ (Siwan) ಜಿಲ್ಲೆಯಲ್ಲಿ ವರದಿಯಾಗಿದೆ.
ಸಿವಾನ್ ಜಿಲ್ಲೆಯ ಬಾಲಾ ಗ್ರಾಮದಲ್ಲಿ ಭಾನುವಾರ ಕಳ್ಳಭಟ್ಟಿ ಸೇವಿಸಿ 3 ಜನರು ಸಾವನ್ನಪ್ಪಿದ್ದರೆ, 6 ಜನರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ಪಾಂಡೆ ಮಧ್ಯರಾತ್ರಿ ಸದರ್ ಆಸ್ಪತ್ರೆಗೆ ತೆರಳಿ ವಿಷಯದ ಬಗ್ಗೆ ವಿಚಾರಿಸಿದ್ದಾರೆ.
Advertisement
Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 3 ಜನರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ 6 ಜನರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಮೇಲ್ನೋಟಕ್ಕೆ ಕಳ್ಳಭಟ್ಟಿ ಸೇವಿಸಿ ಜನರು ಸಾವಿಗೀಡಾಗಿದ್ದಾರೆ. ಅಸ್ವಸ್ಥರು ಸಿವಾನ್ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ಲೀಸ್ ಮುಕ್ತಿ ಕೊಡಿಸಿ ಸರ್- ಎಮ್ಮೆಗಳ ವಿರುದ್ಧ ಅರವಿಂದ ಲಿಂಬಾವಳಿಗೆ ಟೆಕ್ಕಿಗಳಿಂದ ದೂರು!
Advertisement
2022ರ ಡಿಸೆಂಬರ್ನಲ್ಲಿ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 70 ಜನರು ಸಾವನ್ನಪ್ಪಿದ್ದರು. ಛಾಪ್ರಾದಲ್ಲಿ ನಡೆದ ಕಳ್ಳಭಟ್ಟಿ ದುರಂತ (Bihar Hooch Tragedy) ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮದ್ಯ ಕಳ್ಳಸಾಗಣೆ ಮಾಡುತ್ತಿದ್ದವನನ್ನು ಬಂಧಿಸಿ 2.17 ಲಕ್ಷ ರೂ.ಯನ್ನು ವಶಪಡಿಸಿಕೊಂಡಿದ್ದರು.
Advertisement
ಇದೀಗ ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಗುರುತಿಸಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಬಾಳಲ್ಲಿ ಶಿಕ್ಷಣ ಸಂಸ್ಥೆಗಳ ಎಡವಟ್ಟು- ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿಗಳಿಗೆ ಆತಂಕ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k