Districts
KSRTC ಬಸ್, ಓಮ್ನಿ ಕಾರ್ ಡಿಕ್ಕಿ- ಮದುವೆ ವಿಡಿಯೋ ಚಿತ್ರೀಕರಣ ಮುಗಿಸಿ ಬರುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಕೆಎಸ್‍ಆರ್‍ಟಿಸಿ ಬಸ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿಯಾಗಿ ಕಾರ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ, ಚನ್ನಪಿಳ್ಳೆಕೊಪ್ಪಲು ಗ್ರಾಮದ ಬಳಿ ನಡೆದಿದೆ.
ದಿಲೀಪ್, ಕುಮಾರ್, ಮತ್ತು ಗಂಗಾಧರ್ ಮೃತ ದುರ್ದೈವಿಗಳು. ಮೂವರು ಸ್ಟುಡಿಯೋ ಮಾಲೀಕರಾಗಿದ್ದು, ಮದುವೆಯೊಂದಕ್ಕೆ ವಿಡಿಯೋ ಚಿತ್ರೀಕರಣ ಮಾಡಲು ಹೋಗಿದ್ರು. ಚಿತ್ರೀಕರಣ ಮುಗಿಸಿ ಕಿರುಗಾವಲು ರಸ್ತೆಯಲ್ಲಿ ಮಳವಳ್ಳಿ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ, ಮಳವಳ್ಳಿಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಮುಖಾ ಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ತಿರುವಿನಿಂದ ಕೂಡಿದ್ದು, ಎರಡೂ ವಾಹನಗಳು ವೇಗವಾಗಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
