ವಾಷಿಂಗ್ಟನ್: ಇಂಡಿಯಾನಾದ ಮಾಲ್‍ನ ಫುಡ್ ಕೋರ್ಟ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರೀನ್‍ವುಡ್ ಪಾರ್ಕ್ ಮಾಲ್‍ನಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಬಂದೂಕುಧಾರಿಯನ್ನು ನಾಗರಿಕರು ಹತ್ಯೆ ಮಾಡಿದ್ದಾರೆ. ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆ ದಾಖಲಿಸಲಾಗಿದೆ ಎಂದು ಗ್ರೀನ್‍ವುಡ್ ಪೊಲೀಸರು ತಿಳಿಸಿದರು.
Advertisement
Advertisement
ಗುಂಡಿನ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ನೋಡಿದ ಇಬ್ಬರು ನಾಗರಿಕರು ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ ಈ ಗುಂಡಿನ ದಾಳಿಯ ಹಿಂದಿರುವ ಉದ್ದೇಶ ಇನ್ನೂ ಪತ್ತೆ ಆಗಿಲ್ಲ. ಇದನ್ನೂ ಓದಿ: 6 ತಿಂಗಳಲ್ಲಿ 309 ಸಾಮೂಹಿಕ ಗುಂಡಿನ ದಾಳಿ – ಅಮೆರಿಕದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಬಲಿ
Advertisement
ಬಂದೂಕುಧಾರಿಯ ಬಳಿ ಲಾಂಗ್ ರೈಫಲ್ ಮತ್ತು ಮದ್ದುಗುಂಡುಗಳು ಇದ್ದವು. ಘಟನೆ ಸಂಬಂಧಿಸಿ ತನಿಖೆ ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬ್ರಿಟನ್ ಪಿಎಂ ರೇಸ್ – ದಿನ ಕಳೆದಂತೆ ಸುನಾಕ್‌ಗೆ ಹೆಚ್ಚಾಗುತ್ತಿದೆ ಬೆಂಬಲ
Advertisement
ಪ್ರತಿವರ್ಷ ಅಮೆರಿಕಾದಲ್ಲಿ 40 ಸಾವಿರ ಮಂದಿ ತುಪಾಕಿಗೆ ಬಲಿ ಆಗ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಸಕ್ತ 2022ರಲ್ಲಿ 6 ತಿಂಗಳಲ್ಲೇ 309ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು, ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕಾಗೋನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯು ಅಮೆರಿಕ ಜನತೆಯನ್ನೇ ಬೆಚ್ಚಿ ಬೀಳಿಸಿದೆ.