ಚಿಕ್ಕಬಳ್ಳಾಪುರ: ನೀರಿನ ಹೊಂಡದಲ್ಲಿ ಈಜಲು (Swimming) ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಂಜಿತ್ (27) ಅಭಿಲಾಷ್ (21) ಹಾಗೂ ರಮ್ಯ (24) ಎಂದು ಗುರುತಿಸಲಾಗಿದೆ. ಮೂವರು ಬೆಂಗಳೂರಿನಲ್ಲಿ (Bengaluru) ವ್ಯಾಸಂಗ ಮಾಡುತ್ತಿದ್ದರು. ದೀಪಾವಳಿ ಹಬ್ಬಕ್ಕೆ ಸ್ವಗ್ರಾಮಕ್ಕೆ ಬಂದಿದ್ದರು. ಈ ವೇಳೆ ನೀರಿನ ಹೊಂಡದಲ್ಲಿ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಸ್ಥಳೀಯರು, ಆಗ್ನಿಶಾಮಕ ದಳ ಸಿಬ್ಬಂದಿ ನೆರವಿನೊಂದಿಗೆ ಮೃತದೇಹಗಳನ್ನು ಹೊರ ತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೇರೇಸಂದ್ರ ಪೊಲೀಸರು (Police) ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.