ಲಕ್ನೋ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಸೇರಿಕೊಂಡು ಸೆಕ್ಯೂರಿಟಿ ಗಾರ್ಡ್ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನೋಯ್ಡಾದ ಸೆಕ್ಟರ್-121ರಲ್ಲಿ (Noida’s Sector-121) ನಡೆದಿದೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ವೀಡಿಯೋದಲ್ಲಿ ಮಹಿಳೆಯೊಬ್ಬರು ಸೆಕ್ಯೂರಿಟಿ ಗಾರ್ಡ್ ಕೊರಳಪಟ್ಟಿ ಹಿಡಿದುಕೊಂಡಿರುವುದನ್ನು ಕಾಣಬಹುದಾಗಿದೆ. ಈ ಸಂಬಂಧ ಪೊಲೀಸರು ಇದೀಗ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ಮನೆಯಿಂದ ನವಾಜ್ ಔಟ್- ಇಷ್ಟವಾಗಲಿಲ್ಲ ಹುಡುಗನ ನಡೆ
Advertisement
Looks like Noida finally has an identity ???????? Fresh in from Sector 121, Ajnara Homes Society ???????? pic.twitter.com/OpO1k1ozQf
— Shiv Aroor (@ShivAroor) October 8, 2022
Advertisement
ಸೆಕ್ಯೂರಿಟಿ ಗಾರ್ಡ್ ಅನ್ನು ಪಂಕಜ್ ಎಂದು ಗುರುತಿಸಲಾಗಿದ್ದು, ನೋಯ್ಡಾ ಸೊಸೈಟಿಗೆ ಮಹಿಳೆಯರು ಬಂದು ಕರ್ತವ್ಯನಿರತರಾಗಿದ್ದ ಪಂಕಜ್ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರು ಬಂದ ವಾಹನದಲ್ಲಿ ಸೊಸೈಟಿ ಸ್ಟಿಕ್ಕರ್ ಇಲ್ಲದೇ ಇರುವುದಕ್ಕೆ ಅವರನ್ನು ಸೆಕ್ಯೂರಿಟಿ ಗಾರ್ಡ್ ಅಡ್ಡ ಹಾಕಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆಯರು ಆತನ ವಿರುದ್ಧ ನಿಂದಿಸಲು ಆರಂಭಿಸಿದರು. ಈ ವೇಳೆ ಜಗಳ ಬಿಡಿಸಲು ಇತರ ಸೆಕ್ಯೂರಿಟ ಗಾರ್ಡ್‍ಗಳು ಮಧ್ಯೆ ಪ್ರವೇಶಿಸಿದಾಗ, ಕುಡಿದ ಮತ್ತಿನಲ್ಲಿದ್ದ ಮಹಿಳೆಯರು ಅವರೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು.
Advertisement
ಈ ಸಂಬಂಧ ಸೆಕ್ಯೂರಿಟಿ ಗಾರ್ಡ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅವರಲ್ಲಿ ಇಬ್ಬರಿಗೆ ಚಲನ್ ಜಾರಿ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಮಗನೇ ಟ್ರೈಲರ್ ರಿಲೀಸ್‍ಗೆ ನೀನೇ ನನ್ನ ಕರೆದೊಯ್ಯುತ್ತಿರುವೆ- ರಾಘಣ್ಣ ಭಾವುಕ
Advertisement
ಸಿಆರ್‌ಪಿಸಿ ಸೆಕ್ಷನ್ 151ರ ಅಡಿಯಲ್ಲಿ ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಅವರನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಮತ್ತು ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 323 (ಸ್ವಯಿಚ್ಛೆಯಿಂದ ಗಾಯವನ್ನುಂಟು ಮಾಡಿದ್ದಕ್ಕೆ ದಂಡನೆ) ಮತ್ತು 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.