ಇಂಫಾಲ: ಮಣಿಪುರದಲ್ಲಿ (Manipur) 5.2 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಬುಧವಾರ ಬೆಳಗಿನ ಜಾವ 1:54 ರ ವೇಳೆ ಸರಣಿ ಭೂಕಂಪ ಸಂಭವಿಸಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಮಣಿಪುರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು – 44 ಶಾಸಕರ ಬೆಂಬಲವಿದೆ ಎಂದ ಎನ್‌ಡಿಎ
ನೊನಿ ಜಿಲ್ಲೆಯಲ್ಲಿ ಬೆಳಿಗ್ಗೆ 2:26 ಕ್ಕೆ 2.5 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ. ಬೆಳಿಗ್ಗೆ 10:23 ಕ್ಕೆ ಚುರಾಚಂದ್‌ಪುರದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಇಲ್ಲಿಯವರೆಗೆ ಯಾವುದೇ ಸಾವುನೋವು ಅಥವಾ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ದಾವಣಗೆರೆ | ಯುವತಿಗೆ ಕಮಿಷನ್ ಆಸೆ ತೋರಿಸಿ 13 ಲಕ್ಷ ನಾಮ!