ಬೆಂಗಳೂರು: ಕೋಡ್ ವರ್ಡ್ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳನ್ನು ರಾಜಧಾನಿಯ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅಜಯ್, ರಾಜು, ರವಿ ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ 40 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಗಾಂಜಾ ದಂಧೆಕೋರರು ಮಾಸ್ಟರ್ ಪ್ಲಾನ್ ಮಾಡಿ ಕೋಡ್ ವರ್ಡ್ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಸಲೀಸಾಗಿ ತಿಂದ ಭೂಪ
ಮೂರ್ನಾಲ್ಕು ಕಡೆ ವಾಹನ ಬದಲಿಸಿ ಬೆಂಗಳೂರಿಗೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದರು. ಒಡಿಶಾದಿಂದ ವಿಶಾಖಪಟ್ಟಣಕ್ಕೆ ಒಂದು ವಾಹನ, ಅಲ್ಲಿಂದ ಬೆಂಗಳೂರಿಗೆ ಮತ್ತೊಂದು ವಾಹನದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ
ಸದ್ಯ ಮಾರತ್ತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.