ರಾಯಚೂರು: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನು ಹಿಂಬಾಲಿಸಿದ ಆದೇ ಗ್ರಾಮದ ಯಮನಪ್ಪ (20), ರಂಗಪ್ಪ (21) ಮತ್ತು ಮಂಜು (20) ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಆದೇ ಗ್ರಾಮದ ಯುವಕರಾದ ಕಾರಣ ಬಾಲಕಿ ಪೋಷಕರಿಗೆ ಕೃತ್ಯದ ಬಗ್ಗೆ ಹೇಳಿದ್ದು, ಪೋಷಕರು ಸಿರವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಗಳ ಕೃತ್ಯದಿಂದ ನಿತ್ರಾಣಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಸದ್ಯ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ಬಗ್ಗೆ ದೂರು ದಾಖಲಿಸಿ ಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೇ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv