ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ದಾಳಿ ಮುಂದುವರಿದಿದೆ. ಕಳೆದ 2 ದಿನಗಳಲ್ಲಿ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, 8 ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ
ಎಂದು ವರದಿಯಾಗಿದೆ.
ಮೈಮೆನ್‌ಸಿಂಗ್‌ನ ಹಲುಘಾಟ್ ಉಪಜಿಲ್ಲೆಯಲ್ಲಿ ಗುರುವಾರ ಮತ್ತು ಶುಕ್ರವಾರದಂದು ಪ್ರತ್ಯೇಕ ಘಟನೆಗಳಲ್ಲಿ ಎರಡು ದೇವಾಲಯಗಳಲ್ಲಿನ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಶುಕ್ರವಾರ ಮುಂಜಾನೆ ಶಕುವಾಯ್ ಯೂನಿಯನ್‌ನಲ್ಲಿರುವ ಬೋಂಡರ್‌ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳನ್ನು ಹಾನಿಗೊಳಿಸಲಾಗಿದೆ ಎಂದು ಹಲುಘಾಟ್ ಪೊಲೀಸ್ ಠಾಣೆಯ ಅಧಿಕಾರಿ ಅಬುಲ್ ಖಯೇರ್ ಹೇಳಿದ್ದಾರೆ. ಈವರೆಗೂ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಮತ್ತು ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಖಯೇರ್ ತಿಳಿಸಿದ್ದಾರೆ.
Advertisement
Advertisement
ಮತ್ತೊಂದು ಪ್ರಕರಣದಲ್ಲಿ ಗುರುವಾರ ಮುಂಜಾನೆ ಬೀಳ್‌ದೊರ ಒಕ್ಕೂಟದ ಪೊಲಾಶ್‌ಕಂಡ ಕಾಳಿ ದೇವಸ್ಥಾನದ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ಪೋಲಷ್ಕಂಡ ಗ್ರಾಮದ ನಿವಾಸಿ 27 ವರ್ಷದ ಅಲಾಲ್ ಉದ್ದೀನ್ ಎಂಬಾತನನ್ನು ಪೊಲೀಸರು ನಂತರ ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಶಂಕಿತ ಅಪರಾಧ ಒಪ್ಪಿಕೊಂಡಿದ್ದಾನೆ ಎಂದು ಖಯೇರ್ ಹೇಳಿದರು. ಶಂಕಿತನನ್ನು ಶುಕ್ರವಾರ ಮೈಮೆನ್‌ಸಿಂಗ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಜೈಲಿಗೆ ಕಳುಹಿಸಲಾಗಿದೆ.
Advertisement
Advertisement
ದಿನಾಜ್‌ಪುರದ ಬಿರ್‌ಗಂಜ್ ಉಪಜಿಲ್ಲೆಯಲ್ಲಿ ಮಂಗಳವಾರ ಜರ್ಬರಿ ಶಶನ್ ಕಾಳಿ ದೇವಸ್ಥಾನದಲ್ಲಿ ಐದು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿತ್ತು, ಘಟನೆಯು ಗುರುವಾರ ಬೆಳಕಿಗೆ ಬಂದಿತು. ಇಂತಹ ಕೃತ್ಯವನ್ನು ನಾವು ಇಲ್ಲಿ ನೋಡಿಲ್ಲ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಜನಾರ್ದನ್ ರಾಯ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪ್ರಭಾರಿ ಅಧಿಕಾರಿ ಅಬ್ದುಲ್ ಗಫೂರ್ ತಿಳಿಸಿದ್ದಾರೆ.
ಆಗಸ್ಟ್‌ನಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಆಸ್ತಿಗಳ ಮೇಲೆ ದಾಳಿಗಳು ಹೆಚ್ಚಾಗುತ್ತಿರುವ ಮಧ್ಯೆ ಇತ್ತೀಚಿನ ಘಟನೆಗಳು ಬೆಳಕಿಗೆ ಬಂದಿವೆ. ಕಳೆದ ವಾರ ಸುನಮ್‌ಗಂಜ್ ಜಿಲ್ಲೆಯಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಮತ್ತು ಹಿಂದೂ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಿದ ನಾಲ್ವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.