ವಾಷಿಂಗ್ಟನ್: ಅಮೆರಿಕಾದಲ್ಲಿ (America) ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ (Gujarat) ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತೈವಾನ್‌ನಲ್ಲಿ ಮತ್ತೆ ನಡುಗಿದ ಭೂಮಿ- ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು
Advertisement
Advertisement
I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿದೆ. ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಗಾಳಿಯಲ್ಲಿ ಕಾರು ಹಾರಿತು.
Advertisement
ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಲಾಗಿತ್ತು ಎಂಬುದು ಸ್ಪಷ್ಟವಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ. ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಬೇರೆ ಯಾವುದೇ ವಾಹನಗಳು ಓಡಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಭಾರತ ಮೂಲದ ವ್ಯಕ್ತಿಗೆ ಗುಂಡಿಕ್ಕಿ ಕೊಂದ ಅಮೆರಿಕ ಪೊಲೀಸರು
Advertisement
ಕಾರು ಮರದ ಮೇಲೆ ಸಿಲುಕಿಕೊಂಡಿತ್ತು. ಹಲವು ತುಂಡುಗಳಾಗಿ ಛಿದ್ರಗೊಂಡಿತ್ತು. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಕಾರು ಡಿಕ್ಕಿ ಹೊಡೆದ ಹೊಡೆದಿರುವ ಕುರುಹುಗಳೂ ಗೋಚರಿಸಿವೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.
ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ.