ಬೆಂಗಳೂರು: ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನಿಂದ ತಮಿಳುನಾಡಿನತ್ತ ತೆರಳುತ್ತಿದ್ದ ಲಾರಿಗೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಟೈರ್ ಸ್ಪೋಟಗೊಂಡು ಡಿವೈಡರ್ ದಾಟಿ ಎದುರು ಬರುತ್ತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾಂಟರ್ ನಲ್ಲಿದ್ದ 3 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Advertisement
ಈ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟವರ ಬಗ್ಗೆ ಯಾವುದೇ ವಿವರ ತಿಳಿದು ಬಂದಿಲ್ಲ. ಲಾರಿ ಚಾಲಕ ಹಾಗೂ ಕ್ಯಾಂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಂಚಾರ ದಟ್ಟಣೆ ಆಗಿದೆ.
Advertisement
ಅಪಘಾತದಿಂದ ಮೂರು ನಾಲ್ಕು ಕಿ.ಮೀ ಉದ್ದ ವಾಹನಗಳು ಸಾಲುಗಟ್ಟಿ ನಿಂತಿದೆ. ಸದ್ಯ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ವಾಹನ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.