ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ನಡೆದ ಸ್ಫೋಟದಲ್ಲಿ ಮೂವರಿಗೆ ಗಾಯವಾದ ಘಟನೆ ಉಡುಪಿ (Udupi) ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದ್ದು, ದಶಕಗಳಿಂದ ಈ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬೆಳಗ್ಗೆ ನಡೆದ ಸ್ಫೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂವರಿಗೆ ಗಾಯವಾಗಿದೆ. ಇದನ್ನೂ ಓದಿ: ಹಿಂದೆ ಡಿಕೆಶಿ ಟೆಂಟ್‌ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರಿಸಿದ್ದಾರೆ: ಸಿಪಿವೈ ವಾಗ್ದಾಳಿ
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.