-ರಾಜಕಾರಣಿ, ನಟ-ನಟಿಯರ ಜೊತೆ ಪೋಟೋ ತೆಗೆಸಿಕೊಂಡು ದುರ್ಬಳಕೆ ಆರೋಪ
ಬೆಂಗಳೂರು: ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ಖರೀದಿಸಿ ಹಣ ಪಾವತಿಸದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ಬಾಗಲಗುಂಟೆ (Bagalagunte) ನಿವಾಸಿ ಶ್ವೇತಾಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಪುಲಕೇಶಿ ನಗರ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – ಇಂದಿನಿಂದ ಮೋದಿ ಕುವೈತ್ ಪ್ರವಾಸ
ಕೆಲ ದಿನಗಳ ಹಿಂದೆ ಕಮರ್ಷಿಯಲ್ ಮುಖ್ಯರಸ್ತೆಯ ನವರತ್ನ ಜ್ಯುವೆಲ್ಸ್ ಮಾಲೀಕ ಸಂಜಯ್ ಭಾಷ್ನಾ ಅವರನ್ನು ಶ್ವೇತಾಗೌಡ ಭೇಟಿಯಾಗಿದ್ದಳು. ತಾನು ಚಿನ್ನಾಭರಣ ವ್ಯಾಪಾರ ಆರಂಭಿಸುತ್ತಿದ್ದು, ನಿಮ್ಮಿಂದಲೇ ಆಭರಣ ಖರೀದಿಸುತ್ತೇನೆ ಎಂದಿದ್ದಳು. ಇದಕ್ಕೆ ಸಂಜಯ್ ಸಹ ಸಮ್ಮಿತಿಸಿದ್ದರು. ಆಕೆಯ ಮಾತು ನಂಬಿ ಆರಂಭದಲ್ಲಿ ಎರಡು ಮೂರು ಬಾರಿ ಶ್ವೇತಾ ನೀಡಿದ್ದ ಮನೆ ವಿಳಾಸಕ್ಕೆ ಚಿನ್ನಾಭರಣ ಕಳುಹಿಸಿದ್ದರು.
ಹೀಗೆ ವಿಶ್ವಾಸಗಳಿಸಿದ ಶ್ವೇತಾ, ಕೊನೆಗೆ ನವರತ್ನ ಜ್ಯುವೆಲರ್ಸ್ನಲ್ಲಿ 2.42 ಕೋಟಿ ರೂ. ಮೌಲ್ಯದ 2.945 ಕೆಜಿ ಚಿನ್ನ ಹಾಗೂ ವಜ್ರಾಭರಣ ಖರೀದಿಸಿ ವಂಚಿಸಿದ್ದಳು. ಅಲ್ಲದೆ ಚಿನ್ನ ಮರಳಿಸಿ ಇಲ್ಲ ಹಣ ಪಾವತಿಸುವಂತೆ ಕೇಳಿದ್ದ ಚಿನ್ನದ ವ್ಯಾಪಾರಿಗೆ ಆಕೆ ಧಮ್ಕಿ ಹಾಕಿದ್ದಳು.
ಈ ಬಗ್ಗೆ ಜ್ಯುವೆಲರ್ಸ್‌ನ ಮಾಲಿಕ ಸಂಜಯ್ ಕಮಿರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಪುಲಿಕೇಶಿನಗರ ಉಪವಿಭಾಗದ ಎಸಿಪಿ ಗೀತಾ ಅವರು ತನಿಖೆ ಕೈಗೆತ್ತಿಕೊಂಡಿದ್ದರು. ಇದನ್ನು ತಿಳಿದ ಆರೋಪಿ ಕೂಡಲೇ ನಗರದಿಂದ ಪರಾರಿಯಾಗಿದ್ದಳು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಮೈಸೂರಿನಲ್ಲಿ ಆಕೆಯನ್ನು ಬಂಧಿಸಲಾಯಿತು. ಜೊತೆಗೆ ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಾಜಿ ಸಚಿವರ ಮನೆ ವಿಳಾಸ ನೀಡಿರುವ ಆರೋಪದ ಆಧಾರದ ಮೇಲೆ ವರ್ತೂರು ಪ್ರಕಾಶ್ ವಿಚಾರಣೆಗೆ ಪೊಲೀಸರು ನಿರ್ಧರಿಸಿದ್ದಾರೆ. ಈ ಬಗ್ಗೆ ವರ್ತೂರು ಪ್ರಕಾಶ್ ಮಾತನಾಡಿ, ಫೋನ್‌ನಲ್ಲಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸಿಟಿ ರವಿ ಕೇಸ್ – ಪ್ರತಿಷ್ಠಿಗೆ ಬಿದ್ದು ಏನೋ ಮಾಡಲು ಹೋಗಿ ಯಡವಟ್ಟು ಮಾಡಿತಾ ಸರ್ಕಾರ?