ಲಕ್ನೋ: ಬೇರೊಂದು ಬಸ್‍ನ್ನು ಓವರ್ ಟೇಕ್ ಮಾಡಲು ಹೋಗಿ ಬಸ್ ಪಲ್ಟಿಯಾಗಿ 3 ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಅಯೋಧ್ಯೆಯಲ್ಲಿ ನಡೆದಿದೆ.
ದೆಹಲಿಯಿಂದ ಬರುತ್ತಿದ್ದ ಬಸ್, ಸಿದ್ಧಾರ್ಥ್ ನಗರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಚಾಲಕ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡಲು ಯತ್ನಿಸಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ಅಯೋಧ್ಯೆಯ ಕ್ಯಾಂಟ್ ಕೋಟ್ವಾಲಿ ಪ್ರದೇಶದ ಮುಮ್ತಾಜ್ ನಗರದ ಬಳಿ ಇಂದು ಬಸ್ ಪಲ್ಟಿಯಾಗಿದೆ.
ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.