ಗಾಂಧಿನಗರ: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ
ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು (Bullet Train) ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (NHSRCL) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Raichur | ಎಗ್ಗಿಲ್ಲದೆ ಕಲಬೆರಕೆ ಸೇಂದಿ ಮಾರಾಟ- ಅಧಿಕಾರಿಗಳ ದಾಳಿ ವೇಳೆ 500 ಗ್ರಾಂ ಸಿಎಚ್ ಪೌಡರ್ ಜಪ್ತಿ
ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲಾರಿ, ಕಾರು ನಡುವೆ ಅಪಘಾತ- ದಂಪತಿ ಸ್ಥಳದಲ್ಲೇ ಸಾವು